HomeLive Newsನಾಳೆಯಿಂದ ಶುರುವಾಗಲಿದೆ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಟಿ20 ಸರಣಿ

ನಾಳೆಯಿಂದ ಶುರುವಾಗಲಿದೆ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಟಿ20 ಸರಣಿ

ಟಿ20 ವಿಶ್ವಕಪ್ ಫೈನಲ್ ನಲ್ಲಿ ಭಾರತದ ಎದುರು ಕೆಲವೇ ಅಂತರದಿಂದ ಸೋಲು ಕಂಡಿದ್ದ ದಕ್ಷಿಣ ಆಫ್ರಿಕಾ ತಂಡ ಇದೀಗ ಮತ್ತೊಮ್ಮೆ  ಮುಖಾಮುಖಿಯಾಗುತ್ತಿದ್ದು, ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುತ್ತಿದ್ದಾರೆ. ನವೆಂಬರ್ 8 ರಿಂದ  15 ರವರೆಗೆ ದಕ್ಷಿಣ ಆಫ್ರಿಕಾದಲ್ಲಿ ನಾಲ್ಕು ಟಿ ಟ್ವೆಂಟಿ ಪಂದ್ಯಗಳು ನಡೆಯಲಿದ್ದು, ಯುವ ಭಾರತ ತಂಡ ಮತ್ತೊಂದು ದಾಖಲೆ ಬರೆಯಲು ಸಜ್ಜಾಗಿದೆ. ಈಗಾಗಲೇ ಉಭಯ ತಂಡಗಳ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ಭಾರತ  ತಂಡ;ಸೂರ್ಯಕುಮಾರ್ ಯಾದವ್ (ನಾಯಕ), ಸಂಜು ಸ್ಯಾಮ್ಸನ್, ರಿಂಕು ಸಿಂಗ್, ಅಭಿಷೇಕ್ ಶರ್ಮಾ,  ತಿಲಕ್ ವರ್ಮಾ, ಜಿತೇಶ್ ಶರ್ಮಾ, ಅರ್ಷದೀಪ್ ಸಿಂಗ್, ವಿಜಯಕುಮಾರ್ ವೈಶಾಕ್, ಅವೇಶ್ ಖಾನ್, ಯಶ್ ದಯಾಳ್, ಹಾರ್ದಿಕ್ ಪಾಂಡ್ಯ, ರಮಣದೀಪ್ ಸಿಂಗ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ.

ದಕ್ಷಿಣ ಆಫ್ರಿಕಾ ತಂಡ: ಐಡೆನ್ ಮಾರ್ಕ್ರಾಮ್ (ನಾಯಕ), ಪ್ಯಾಟ್ರಿಕ್ ಕ್ರುಗರ್, ಕೇಶವ್ ಮಹಾರಾಜ್, ಡೇವಿಡ್ ಮಿಲ್ಲರ್, ಮಿಹ್ಲಾಲಿ ಎಂಪೊಂಗ್ವಾನಾ, ನ್ಕಾಬಾ ಸಿಮೆಲ್ಟನ್, ರಿಯಾನಿಲ್ ಸಿಮೆಲ್ಟನ್, ರಿಯಾನ್ ಸಿಮೆಲ್ಟನ್ ಸಿಪಾಮ್ಲಾ, ಟ್ರಿಸ್ಟಾನ್ ಸ್ಟಬ್ಸ್. ಒಟ್ನೀಲ್ ಬಾರ್ಟ್‌ಮ್ಯಾನ್, ಜೆರಾಲ್ಡ್ ಕೊಯೆಟ್ಜಿ, ಡೊನೊವನ್ ಫೆರೆರಾ, ರೀಜಾ ಹೆಂಡ್ರಿಕ್ಸ್, ಮಾರ್ಕೊ ಜಾನ್ಸೆನ್, ಹೆನ್ರಿಚ್ ಕ್ಲಾಸೆನ್.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular