ಬಿಜೆಪಿ ತನ್ನ ಅವಧಿಯಲ್ಲಿ ಇಡೀ ಸಂಡೂರಿಗೆ ಒಂದೇ ಒಂದು ಮನೆ ಕಟ್ಟಿ ಕೊಡಲಿಲ್ಲ : CM ಸಿದ್ದರಾಮಯ್ಯ ವಾಗ್ಧಾಳಿ

ಬಳ್ಳಾರಿ : ಸಂಡೂರಿನಲ್ಲಿ ಅನ್ನಪೂರ್ಣಮ್ಮ ಅವರನ್ನು 50 ಸಾವಿರ ಮತಗಳ ಅಂತರದಿಂದ ಗೆಲ್ಲಿಸಿದರೆ ನನಗೆ ದೊಡ್ಡ ಶಕ್ತಿ ಬರುತ್ತದೆ. ಎಂದು ಸಂಡೂರಿನ ವಡ್ಡು ಗ್ರಾಮದಲ್ಲಿ ನಡೆದ ಬೃಹತ್ ಜನಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯದಲ್ಲೂ ಅಧಿಕಾರ ನಡೆಸಿದ ಸರ್ಕಾರ ಕೇವಲ ಲೂಟಿ ಮಾಡಿ ಮನೆ ಸೇರಿದ್ದು ಬಿಟ್ಟರೆ ಅಭಿವೃದ್ಧಿ ಕಡೆ ತಲೆ ಹಾಕಿ ಕೂಡ ಮಲುಗಲಿಲ್ಲ. ಬಿಜೆಪಿ ತನ್ನ ಅವಧಿಯಲ್ಲಿ ಇಡೀ ಸಂಡೂರಿಗೆ ಒಂದೇ ಒಂದು ಮನೆ ಕಟ್ಟಿ ಕೊಡಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ.

ಇದನ್ನೆಲ್ಲಾ ನಾನು ಪ್ರಶ್ನಿಸುತ್ತೇನೆ ಎನ್ನುವ ಕಾರಣಕ್ಕೆ, ಪ್ರಧಾನಿ ಅವರು ರಾಜ್ಯಕ್ಕೆ ಮಾಡಿರುವ ಅನ್ಯಾಯಗಳ ವಿರುದ್ಧ ಬೆಂಗಳೂರಿನಿಂದ ದೆಹಲಿವರೆಗೂ ಹೋಗಿ ಹೋರಾಟ ಮಾಡಿದೆವು ಎನ್ನುವ ಕಾರಣದಿಂದ ನನ್ನ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ತೊಂದರೆ ಕೊಡುತ್ತಿದ್ದಾರೆ. ಇದಕ್ಕೆಲ್ಲಾ ಉತ್ತರ ಕೊಡುವ ಕಾಲ ಬಂದಿದೆ. ಈ ಉಪ ಚುನಾವಣೆಯಲ್ಲಿ ಮೂರಕ್ಕೆ ಮೂರೂ ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಜಯಭೇರಿ ಬಾರಿಸುತ್ತಾರೆ ಎಂದರು.

1947 ರಿಂದ 2014 ರವರೆಗೂ ಭಾರತ ದೇಶದ ಸಾಲ ಇದ್ದದ್ದು ಕೇವಲ ₹54 ಲಕ್ಷ ಕೋಟಿ. ಮೋದಿ ಅವರು ಪ್ರಧಾನಿ ಆದ 10 ವರ್ಷಗಳಲ್ಲಿ ದೇಶದ ಸಾಲ ₹185 ಲಕ್ಷ ಕೋಟಿಗೆ ಏರಿಕೆಯಾಗಿದೆ. ಕೇವಲ ಮೋದಿಯವರು ಒಬ್ಬರೇ ತಮ್ಮ ಅವಧಿಯಲ್ಲಿ ₹135 ಲಕ್ಷ ಕೋಟಿ ಸಾಲ ಮಾಡಿಟ್ಟಿದ್ದಾರೆ. ಇದೆಲ್ಲವನ್ನೂ ತೀರಿಸುವ ಜವಾಬ್ದಾರಿ ಭಾರತೀಯರ ತಲೆಗೆ ಬಂದಿದೆ. ಇದೇ ಮೋದಿಯವರ ಕೀರ್ತಿ.

ರೈತರ ಬದುಕನ್ನು ಮಾರಣ ಹೋಮ ಮಾಡುವ ಕರಾಳ ಕಾಯ್ದೆಗಳನ್ನು ಬಿಜೆಪಿ ಸರ್ಕಾರ ಜಾರಿಗೆ ತಂದಿತು. ದೇಶಾದ್ಯಂತ ರೈತರು ನಡೆಸಿದ ವಿರೋಚಿತ ಹೋರಾಟಕ್ಕೆ ಶರಣಾಗಿ ಮೋದಿ ಅವರು ರೈತ ವಿರೋಧಿ ಕಾಯ್ದೆಗಳನ್ನು ವಾಪಾಸ್ ಪಡೆದರು. ರೈತರ ಬದುಕಿಗೆ ಕರಾಳತೆ ಸೃಷ್ಟಿಸಿದ ಮೋದಿ ಅವರ ಸರ್ಕಾರ ಮತ್ತೊಂದು ಕಡೆ ಸಂವಿಧಾನ ಬದಲಾಯಿಸುವ ಹುನ್ನಾರ ನಡೆಸುತ್ತಾ, ಇಡೀ ದೇಶದ ಶ್ರಮಿಕ ಮತ್ತು ದುಡಿಯುವ ವರ್ಗಗಳ ಬದುಕಿನ ಅವಕಾಶಗಳನ್ನು ಹೊಸಕಿ ಹಾಕುವ ಹುನ್ನಾರವನ್ನೂ ನಡೆಸುತ್ತಿದೆ. ಬಿಜೆಪಿ ಸಂಸದ ಅನಂತ ಕುಮಾರ ಹೆಗ್ಡೆ ಅವರು ಬಿಜೆಪಿ ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾಯಿಸಲಿಕ್ಕೆ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು ಪ್ರಧಾನಿ ಮೋದಿ ಅವರು ಅಲ್ಲಗಳೆಯಲಿಲ್ಲ ಎಂದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read