ರೋರಿಂಗ್ ಸ್ಟಾರ್ ಶ್ರೀ ಮುರಳಿ ಅಭಿನಯದ ‘ಬಘೀರಾ’ ಅಂದುಕೊಂಡಂತೆ ಭರ್ಜರಿ ಯಶಸ್ಸು ಕಂಡಿದ್ದು, ಎಲ್ಲರ ಮನೆ ಮಾತಾಗಿದೆ. ಈ ಚಿತ್ರದ ‘ಕಣ್ಣಲ್ಲಿ ಕಣ್ಣಿಡು’ ಎಂಬ ರೋಮ್ಯಾಂಟಿಕ್ ಗೀತೆ ಹೊಂಬಾಳೆ ಫಿಲಂಸ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದ್ದು, ಭರ್ಜರಿ ವೀಕ್ಷಣೆ ಕಂಡಿದೆ ಹರ್ಷಿಕ ದೇವನಾಥ್ ಈ ಹಾಡಿಗೆ ಧ್ವನಿಯಾಗಿದ್ದು, ಬಿ.ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ನೀಡಿದ್ದಾರೆ. ಇನ್ನುಳಿದಂತೆ ಪ್ರಮೋದ್ ಮರವಂತೆ ಅವರ ಸಾಹಿತ್ಯವಿದೆ.
ಡಾ. ಸೂರಿ ನಿರ್ದೇಶನದ ಈ ಚಿತ್ರದಲ್ಲಿ ಶ್ರೀ ಮುರಳಿ ಅವರಿಗೆ ಜೋಡಿಯಾಗಿ ರುಕ್ಮಿಣಿ ವಸಂತ್ ಅಭಿನಯಿಸಿದ್ದು, ಸುಧಾ ರಾಣಿ, ಪ್ರಕಾಶ್ ರಾಜ್, ಅಚ್ಯುತ್ ಕುಮಾರ್, ರಾಮಚಂದ್ರರಾಜು, ರಂಗಾಯಣ ರಘು, ಅವಿನಾಶ್ ಯಳಂದೂರು, ಶರತ್ ಲೋಹಿತಾಶ್ವ, ಪ್ರಮೋದ್ ಶೆಟ್ಟಿ, ಪುನೀತ್ ರುದ್ರನಾಗ್, ಉಳಿದ ಪಾತ್ರವರ್ಗದಲ್ಲಿದ್ದಾರೆ. ಹೊಂಬಾಳೆ ಫಿಲಂಸ್ ಬ್ಯಾನರ್ ನಲ್ಲಿ ವಿಜಯ್ ಕಿರಗಂದೂರು ನಿರ್ಮಾಣ ಮಾಡಿದ್ದಾರೆ. ಪ್ರಣವ್ ಶ್ರೀ ಪ್ರಸಾದ್ ಸಂಕಲನ, ಎಜೆ ಶೆಟ್ಟಿ ಛಾಯಾಗ್ರಹಣವಿದೆ.