HomeKarnatakaರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ‘NMMS’ ಪರೀಕ್ಷೆಗೆ ಶುಲ್ಕ ಪಾವತಿಸಲು ನ.11 ಲಾಸ್ಟ್ ಡೇಟ್

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ‘NMMS’ ಪರೀಕ್ಷೆಗೆ ಶುಲ್ಕ ಪಾವತಿಸಲು ನ.11 ಲಾಸ್ಟ್ ಡೇಟ್

ಬೆಂಗಳೂರು : 2024-25ನೇ ಸಾಲಿನ NMMS ಪರೀಕ್ಷೆಗೆ ಸಂಬಂಧಿಸಿದಂತೆ ಶುಲ್ಕವನ್ನು ಪಾವತಿಸಲು ನ.11 ಕೊನೆಯ ದಿನವಾಗಿದೆ.2024-25ನೇ ಸಾಲಿನ NMMS ಪರೀಕ್ಷೆಯನ್ನು ದಿನಾಂಕ:08.12.2024 ರಂದು ನಡೆಸಲಾಗುತ್ತಿದ್ದು, ಉಲ್ಲೇಖಿತ ಸುತ್ತೋಲೆಯಲ್ಲಿ ದಿನಾಂಕ:19.08.2024 ರಿಂದ 05.10.2024 ರವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶವನ್ನು ನೀಡಲಾಗಿತ್ತು. ಸದರಿ ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ವಿದ್ಯಾಥಿಗಳ ಪರೀಕ್ಷಾ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಲು ದಿsನಾಂಕ: 05.11.2024 ರವರೆಗೆ ಅವಕಾಶವನ್ನು ಕಲ್ಪಿಸಲಾಗಿತ್ತು.

ಮುಂದುವರೆದು ಪರೀಕ್ಷಾ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಲು ದಿನಾಂಕ:11.11.2024 ರವರೆಗೆ ಅವಕಾಶವನ್ನು ಕಲ್ಪಿಸಲಾಗಿದ್ದು, ನಿಗದಿತ ದಿನಾಂಕದೊಳಗೆ ಶುಲ್ಕವನ್ನು ಪಾವತಿಸುವಂತೆ ಎಲ್ಲಾ ಶಾಲಾ ಮುಖ್ಯ ಶಿಕ್ಷಕರು ಹಾಗೂ ಪ್ರಾಂಶುಪಾಲರಿಗೆ ಮಾಹಿತಿ ನೀಡುವಂತೆ ಉಪನಿರ್ದೇಶಕರು (ಆಡಳಿತ) ಮತ್ತು (ಅಭಿವೃದ್ಧಿ) ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಈ ಮೂಲಕ ಸೂಚಿಸಿದೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular