HomeKarnataka'ಗೃಹಲಕ್ಷ್ಮಿ' ಹಣ ಕೂಡಿಟ್ಟು ಪತಿಗೆ ಸ್ಕೂಟರ್ ಕೊಡಿಸಿದ ಪತ್ನಿ

‘ಗೃಹಲಕ್ಷ್ಮಿ’ ಹಣ ಕೂಡಿಟ್ಟು ಪತಿಗೆ ಸ್ಕೂಟರ್ ಕೊಡಿಸಿದ ಪತ್ನಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಕೋಡಿಂಬಾಡಿ ಸಮೀಪದ ಶಾಂತಿನಗರದ ಮಹಿಳೆಯೊಬ್ಬರು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕೂಡಿಟ್ಟು ತನ್ನ ಪತಿಗೆ ಸ್ಕೂಟರ್ ಕೊಡಿಸಿದ್ದಾರೆ.

ಮಿಸ್ರಿಯಾ ಅವರು ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಯಾಗಿದ್ದಾರೆ. ಅವರ ಖಾತೆಗೆ ಜಮೆಯಾಗಿರುವ ಗೃಹಲಕ್ಷ್ಮಿ ಹಣದಿಂದ ಪತಿ ಸಲೀಂ ಅವರಿಗೆ ಸ್ಕೂಟರ್ ಖರೀದಿಸಿ ಕೊಟ್ಟಿದ್ದಾರೆ.

ವೃತ್ತಿಯಲ್ಲಿ ಪೈಂಟರ್ ಆಗಿರುವ ಸಲೀ ಪ್ರತಿದಿನ ದೂರದ ಊರುಗಳಿಗೆ ಕೆಲಸಕ್ಕೆ ಹೋಗುತ್ತಿದ್ದರು. ಇದೀಗ ಪತ್ನಿ ಸ್ಕೂಟರ್ ಕೊಡಿಸಿರುವುದರಿಂದ ಅವರು ಸ್ಕೂಟರ್ ನಲ್ಲಿ ಕೆಲಸಕ್ಕೆ ಹೋಗಿ ಬರಲು ಅನುಕೂಲವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular