World Diabetes Day 2024 : ನ. 14 ರಂದು ಮಧುಮೇಹ, ರಕ್ತದೊತ್ತಡ ಮತ್ತು ಸಾಮಾನ್ಯ ಕ್ಯಾನ್ಸರ್ ಉಚಿತ ತಪಾಸಣೆ ಶಿಬಿರ ಆಯೋಜನೆ

ಧಾರವಾಡ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಎನ್.ಸಿ.ಡಿ ಘಟಕ, ಜಿಲ್ಲಾ ಎನ್.ಸಿ.ಡಿ ಕ್ಲಿನಿಕ್, ಜಿಲ್ಲಾ ಆಸ್ಪತ್ರೆ, ಧಾರವಾಡ ಹಾಗೂ ಎನ್.ಸಿ.ಡಿ ಕ್ಲಿನಿಕ್, ತಾಲೂಕಾ ಆಸ್ಪತ್ರೆ, ಕಲಘಟಗಿ, ಕುಂದಗೋಳ, ನವಲಗುಂದ ವತಿಯಿಂದ ನವೆಂಬರ 14 ರಂದು ವಿಶ್ವ ಮಧುಮೇಹ ದಿನಾಚರಣೆಯ ಅಂಗವಾಗಿ ರಾಷ್ಟ್ರೀಯ ಅಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮ (ಎನ್ಪಿ, ಎನ್ಸಿಡಿ) ದಡಿಯಲ್ಲಿ 30 ವರ್ಷ ಮೇಲ್ಪಟ್ಟವರಿಗೆ ಉಚಿತ ಮಧುಮೇಹ, ರಕ್ತದೊತ್ತಡ ಮತ್ತು ಸಾಮಾನ್ಯ ಕ್ಯಾನ್ಸರ್ ತಪಾಸಣೆಯನ್ನು ಜಿಲ್ಲಾ ಆಸ್ಪತ್ರೆ ಧಾರವಾಡ ಹಾಗೂ ತಾಲೂಕಾ ಆಸ್ಪತ್ರೆ ಕಲಘಟಗಿ, ಕುಂದಗೋಳ, ನವಲಗುಂದದಲ್ಲಿ ಹಮ್ಮಿಕೊಳ್ಳಲಾಗಿದೆ.

ಸಾರ್ವಜನಿಕರು ಉಚಿತ ತಪಾಸಣೆ ಶಿಬಿರಗಳ ಸದುಪಯೋಗ ಪಡೆದುಕೊಳ್ಳಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read