HomeKarnatakaBIG NEWS: ವಾಲ್ಮೀಕಿ ನಿಗಮ ಹಣ ದುರ್ಬಳಕೆ ಪ್ರಕರಣ ಸಿಬಿಐ ತನಿಖೆ ಬಗ್ಗೆ ಇಂದು ಹೈಕೋರ್ಟ್...

BIG NEWS: ವಾಲ್ಮೀಕಿ ನಿಗಮ ಹಣ ದುರ್ಬಳಕೆ ಪ್ರಕರಣ ಸಿಬಿಐ ತನಿಖೆ ಬಗ್ಗೆ ಇಂದು ಹೈಕೋರ್ಟ್ ತೀರ್ಪು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ದುರ್ಬಳಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ಕುರಿತಾಗಿ ಹೈಕೋರ್ಟ್ ಇಂದು ತೀರ್ಪು ಪ್ರಕಟಿಸಲಿದೆ.

ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ ಮೇಲಿನ ತೀರ್ಪನ್ನು ಮಂಗಳವಾರ ಹೈಕೋರ್ಟ್ ಪ್ರಕಟಿಸಲಿದೆ. ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಪ್ರಕರಣ ಸೀಬೆ ತನಿಖೆಗೆ ವರ್ಗಾಯಿಸುವಂತೆ ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ ಅರ್ಜಿಯ ವಿಚಾರಣೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯ ಪೀಠದಲ್ಲಿ ನಡೆದಿತ್ತು.

2024ರ ಸೆಪ್ಟೆಂಬರ್ 30ರಂದು ವಿಚಾರಣೆಯನ್ನು ಮುಕ್ತಾಯಗೊಳಿಸಿದ ನ್ಯಾಯಪೀಠ ತೀರ್ಪು ಕಾಯ್ದಿರಿಸಿತ್ತು. ಮಂಗಳವಾರ ತೀರ್ಪು ಪ್ರಕಟಣೆಯನ್ನು ದೈನಂದಿನ ಸೂಚಿತ ಪಟ್ಟಿಯಲ್ಲಿ ನಮೂದಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular