HomeKarnatakaಮದುವೆ ಆಹ್ವಾನ ಪತ್ರಿಕೆಯಲ್ಲಿ ಮೋದಿ ಪರ ಮತ ಯಾಚಿಸಿದ್ದಕ್ಕೆ ಕೇಸ್: ತಡೆ ನೀಡಿ ಹೈಕೋರ್ಟ್ ಆದೇಶ

ಮದುವೆ ಆಹ್ವಾನ ಪತ್ರಿಕೆಯಲ್ಲಿ ಮೋದಿ ಪರ ಮತ ಯಾಚಿಸಿದ್ದಕ್ಕೆ ಕೇಸ್: ತಡೆ ನೀಡಿ ಹೈಕೋರ್ಟ್ ಆದೇಶ

ಬೆಂಗಳೂರು: ಮದುವೆಯ ಆಮಂತ್ರಣ ಪತ್ರಿಕೆಯಲ್ಲಿ ನರೇಂದ್ರ ಮೋದಿ ಪರ ಮತ ಕೇಳಿದ್ದಕ್ಕೆ ಸುಳ್ಯದ ಶಿವಪ್ರಸಾದ್ ವಿರುದ್ಧ ಚುನಾವಣಾ ಅಧಿಕಾರಿ ಹೂಡಿದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ.

ಮೋದಿಗೆ ಮತ ಹಾಕಿದರೆ ನನಗೆ ಉಡುಗೊರೆ ನೀಡಿದಂತೆ ಎಂದು ಮದುವೆ ಆಹ್ವಾನ ಪತ್ರಿಕೆಯಲ್ಲಿ ಶಿವಪ್ರಸಾದ್ ಉಲ್ಲೇಖಿಸಿದ್ದರು. ಮಾರ್ಚ್ 1ರಂದು ಮದುವೆ ಆಹ್ವಾನ ಪತ್ರಿಕೆ ಮುದ್ರಣವಾಗಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವುದು ಮಾರ್ಚ್ 16ರಂದು. ಆದರೂ ಪ್ರಜಾಪ್ರತಿನಿಧಿ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಿದ್ದು, ರದ್ದುಗೊಳಿಸಬೇಕು ಎಂದು ಅರ್ಜಿದಾರರ ಪರ ವಕೀಲರು ಕೋರಿದ್ದರು.

ನೀತಿ ಸಂಹಿತೆ ಜಾರಿಗಿಂತ ಮೊದಲು ಆಹ್ವಾನ ಪತ್ರಿಕೆ ಮುದ್ರಣವಾಗಿರುವುದರಿಂದ ಸ್ಥಳೀಯ ಕೋರ್ಟ್ ನಲ್ಲಿ ವಿಚಾರಣೆಗೆ ನ್ಯಾಯ ಪೀಠ ತಡೆ ನೀಡಿದೆ. ಅರ್ಜಿದಾರರ ವಿರುದ್ಧ ಪುತ್ತೂರು ಜೆಎಂಎಫ್ಸಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆಗೆ ತಡೆಯಾಜ್ಞೆ ನೀಡಲಾಗುತ್ತಿದೆ ಎಂದು ಹೈಕೋರ್ಟ್ ಆದೇಶಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಚಾರಣೆಯ ವೇಳೆ ಅರ್ಜಿದಾರರ ಪರವಾದ ಮಂಡಿಸಿದ ವಕೀಲ ಎಂ. ವಿನೋದ್ ಕುಮಾರ್ ಇದು ಕಾನೂನುಬಾಹಿರವಾಗಿರುವ ಕಾರಣ ಅರ್ಜಿದಾರರ ವಿರುದ್ಧ ಪ್ರಕರಣ ರದ್ದುಗೊಳಿಸಬೇಕು ಎಂದು ಮನವಿ ಮಾಡಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular