ಕಲಬುರಗಿ : ರೌಡಿಶೀಟರ್ ಓರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಕಲಬುರಗಿ ಜಿಲ್ಲೆಯ ಪಟ್ಟಣ ಗ್ರಾಮದಲ್ಲಿ ನಡೆದಿದೆ.
ಪಟ್ಟಣ ಗ್ರಾಮದಲ್ಲಿ ಸೋಮು ತಾಳಿಕೋಟೆ ಎಂಬ ರೌಡಿಶೀಟರ್ ನನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿ ನಂತರ ರೈಲ್ವೇ ಹಳಿ ಬಳಿ ಶವ ಎಸೆದು ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಹಳೇ ದ್ವೇಷದ ಹಿನ್ನೆಲೆ ಈ ಕೊಲೆ ನಡೆದಿರಬಹುದೆಂದು ಶಂಕಿಸಲಾಗಿದೆ.