ಶಿವಮೊಗ್ಗ : ನೇಕಾರರ ವಿಶೇಷ ಪ್ಯಾಕೇಜ್ ಎಸ್ಸಿಎಸ್ಪಿ/ಟಿಎಸ್ಪಿ ಯೋಜನೆಯಡಿ ಜವಳಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಣ್ಣ ಮತ್ತು ಅತಿ ಸಣ್ಣ ಘಟಕಗಳ ಸ್ಥಾಪನೆಗೆ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಉದ್ದಿಮೆದಾರರು ಹೊಸದಾಗಿ ಜವಳಿ ಕ್ಷೇತ್ರಕ್ಕೆ ಸಂಬಂಧಿಸಿದಂತಹ ಘಟಕ ಸ್ಥಾಪಿಸಲು ಅರ್ಜಿ ಆಹ್ವಾನಿಸಲಾಗಿದೆ.
ಜವಳಿ ಘಟಕಗಳಲ್ಲಿ ಶೇ.75 ರಷ್ಟು ಅಥವಾ ಗರಿಷ್ಟ ರೂ 2.00 ಕೋಟಿಗಳವರೆಗೆ ಸಹಾಯಧನ ಪಡೆಯಬಹುದು. ಆಸಕ್ತ ಜವಳಿ ಉತ್ಪಾದನಾ ಉದ್ದಿಮೆದಾರರು ಅವಶ್ಯ ದಾಖಲಾತಿಗಳೊಂದಿಗೆ ಡಿಸೆಂಬರ್ 7 ರ ರೊಳಗಾಗಿ ಕೈಮಗ್ಗ ಮತ್ತು ಜವಳಿ ಇಲಾಖೆಯ ಕಛೇರಿಗೆ ಅರ್ಜಿ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಛೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಮಂಜುನಾಥ ಟವರ್ಸ್, 2ನೇ ಮಹಡಿ, ಗಾಂಧಿನಗರ, 1ನೇ ಮುಖ್ಯರಸ್ತೆ, ಶಿವಮೊಗ್ಗ ಕಛೇರಿಗೆ ಭೇಟಿ ನೀಡಬಹುದಾಗಿರುತ್ತದೆ. ಅಥವಾ ಕಛೇರಿಯ ದೂರವಾಣಿ ಸಂಖ್ಯೆ 08182223405 ಸಂಪರ್ಕಿಸಬಹುದು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.