HomeKarnatakaBIG NEWS: ಸಚಿವ ಜಮೀರ್ ಅಹ್ಮದ್ ರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿ: ಒಕ್ಕಲಿಗರ ಸಂಘ ಆಗ್ರಹ

BIG NEWS: ಸಚಿವ ಜಮೀರ್ ಅಹ್ಮದ್ ರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿ: ಒಕ್ಕಲಿಗರ ಸಂಘ ಆಗ್ರಹ

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಬಗ್ಗೆ ನಿಂದನಾತ್ಮಕ ಹೇಳಿಕೆ ನೀಡಿರುವ ಸಚಿವ ಜಮೀರ್ ಅಹ್ಮದ್ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಒಕ್ಕಲಿಗರ ಸಂಘ ಆಗ್ರಹಿಸಿದೆ.

ಸಚಿವ ಜಮೀರ್ ಅಹ್ಮದ್ ಉಪಚುನಾವಣೆ ಪ್ರಚಾರದ ವೇಳೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಕರಿಯ ಎಂದು ಕರೆದಿದ್ದರು. ಆಕ್ಷೇಪಾರ್ಹ ಹೇಳಿಕೆ ನೀಡಿರುವ ಜಮೀರ್ ಅಹ್ಮದ್ ವಿರುದ್ಧ ತೀವ್ರ ಖಂಡನೆ ವ್ಯಕ್ತವಾಗಿತ್ತಿದೆ. ತಮ್ಮ ಹೇಳಿಕೆ ವಿವಾದಕ್ಕೆ ತಿರುಗುತ್ತಿದ್ದಂತೆ ಜಮೀರ್ ಅಹ್ಮದ್ ಕ್ಷಮೆಯಾಚಿಸಿದ್ದರು. ಆದರೂ ಇಷ್ಟಕ್ಕೆ ವಿವಾದ ತಣ್ಣಗಾಗುವಂತೆ ಕಾಣುತ್ತಿಲ್ಲ.

ಇದೀಗ ಒಕ್ಕಲಿಗರ ಸಂಘ ಜಮೀರ್ ಅಹ್ಮದ್ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಿದೆ. ಅಲ್ಲದೇ ಮಾಧ್ಯಮ ಪ್ರಕಟಣೆ ಮೂಲಕವಾಗಿ ಜಮೀರ್ ಅಹ್ಮದ್ ಕ್ಷಮೆ ಕೋರಬೇಕು ಎಂದು ಒತ್ತಾಯಿಸಿದೆ. ಇಲ್ಲವಾದಲ್ಲಿ ಪ್ರತಿಭಟನೆ ತೀವ್ರಗೊಳಿಸುವುದಗಿ ಎಚ್ಚರಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular