ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತೆರಿಗೆ ಸಂಗ್ರಹಿಸಲು ಸೋಮವಾರ ಹಮ್ಮಿಕೊಳ್ಳಲಾಗಿದ್ದ.ವಿಶೇಷ ಕಾರ್ಯಾಚರಣೆಯಲ್ಲಿ 1 ಕೋಟಿ 65 ಲಕ್ಷ ರೂ. ತೆರಿಗೆ ಸಂಗ್ರಹಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ. ಇಟ್ನಾಳ್ ತಿಳಿಸಿದ್ದಾರೆ.
ಜಿಲ್ಲೆಯಲ್ಲಿನ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತೆರಿಗೆ ಸಂಗ್ರಹಕ್ಕೆ ವಿಶೇಷ ಆಂದೋಲನ ಕೈಗೊಳ್ಳಲಾಗಿತ್ತು. ಈ ವೇಳೆ ಜಿಲ್ಲೆಯಲ್ಲಿನ ಎಲ್ಲಾ ಗ್ರಾಮ ಪಂಚಾಯಿತಿಯಲ್ಲಿನ ತೆರಿಗೆಯನ್ನು ಸಂಗ್ರಹಿಸಲಾಗಿದೆ.
ಸಂಗ್ರಹಿಸಿದ ತೆರಿಗೆ ತಾಲ್ಲೂಕುವಾರು ವಿವರ: ಚನ್ನಗಿರಿ ತಾಲ್ಲೂಕು 51 ಲಕ್ಷ ರು., ದಾವಣಗೆರೆ ತಾಲ್ಲೂಕು 48 ಲಕ್ಷ ರೂ., ಹರಿಹರ ತಾಲ್ಲೂಕು 22 ಲಕ್ಷ ರೂ., ಹೊನ್ನಾಳಿ ತಾಲ್ಲೂಕು 78 ಲಕ್ಷ ರೂ ಸೇರಿ ಒಟ್ಟು 1,65,50,871 ರೂ. ತೆರಿಗೆ ಸಂಗ್ರಹಿಸಲಾಗಿದೆ.