ನವದೆಹಲಿ: ಪ್ರಜಾಪ್ರಭುತ್ವದ ಹಬ್ಬವಾದ ಚುನಾವಣೆಯಲ್ಲಿ ಉತ್ಸಾಹದಿಂದ ಮತ ಚಲಾಯಿಸುವಂತೆ ಪ್ರಧಾನಿ ಮೋದಿ ಮನವಿ ಮಾಡಿದ್ದಾರೆ.
ಜಾರ್ಖಂಡ್ ನಲ್ಲಿ ಇಂದು ಮೊದಲ ಹಂತದ ಚುನಾವಣೆಗೆ ಮತದಾನ ಆರಂಭವಾಗಿದೆ. ವಿವಿಧ ರಾಜ್ಯಗಳಲ್ಲಿ ಉಪ ಚುನಾವಣೆ ನಡೆಯುತ್ತಿದೆ.
ಬುಧವಾರ ಜಾರ್ಖಂಡ್ನಲ್ಲಿ ಪೂರ್ಣ ಉತ್ಸಾಹದಿಂದ ಮತ ಚಲಾಯಿಸುವಂತೆ ಪ್ರಧಾನಿ ನರೇಂದ್ರ ಮೋದಿ ಎಲ್ಲಾ ಮತದಾರರಿಗೆ ಕರೆ ನೀಡಿದರು. ಜಾರ್ಖಂಡ್ನ 43 ವಿಧಾನಸಭಾ ಸ್ಥಾನಗಳಿಗೆ ಇಂದುಮತದಾನ ಆರಂಭವಾಗಿದ್ದು, ಮಾಜಿ ಸಿಎಂ ಚಂಪೈ ಸೊರೆನ್ ಮತ್ತು ಮಾಜಿ ಸಂಸದೆ ಗೀತಾ ಕೋಡಾ ಸೇರಿದಂತೆ ಒಟ್ಟು 683 ಅಭ್ಯರ್ಥಿಗಳು ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.
ಇಂದು ಜಾರ್ಖಂಡ್ ವಿಧಾನಸಭಾ ಚುನಾವಣೆಯ ಮೊದಲ ಸುತ್ತಿನ ಮತದಾನವಾಗಿದೆ. ಈ ಪ್ರಜಾಪ್ರಭುತ್ವದ ಹಬ್ಬದಲ್ಲಿ ಪೂರ್ಣ ಉತ್ಸಾಹದಿಂದ ಮತ ಚಲಾಯಿಸುವಂತೆ ನಾನು ಎಲ್ಲ ಮತದಾರರನ್ನು ಕೋರುತ್ತೇನೆ. ಈ ಸಂದರ್ಭದಲ್ಲಿ, ನನ್ನ ಎಲ್ಲಾ ಯುವ ಸ್ನೇಹಿತರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಮೊದಲ ಬಾರಿಗೆ ಮತ ಚಲಾಯಿಸಲು ಹೋಗುತ್ತಿರುವಿರಿ – ಮೊದಲ ಮತ, ನಂತರ ಉಲ್ಲಾಸ! ಎಂದು X ನಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ ತಿಳಿಸಿದ್ದಾರೆ.
झारखंड विधानसभा चुनाव में आज पहले दौर की वोटिंग है। सभी मतदाताओं से मेरा आग्रह है कि वे लोकतंत्र के इस उत्सव में पूरे उत्साह के साथ मतदान करें। इस मौके पर पहली बार वोट देने जा रहे अपने सभी युवा साथियों को मेरी बहुत-बहुत बधाई! याद रखें- पहले मतदान, फिर जलपान!
— Narendra Modi (@narendramodi) November 13, 2024