ಬೆಂಗಳೂರು : ಪ್ರತ್ಯೇಕ ಆದಿವಾಸಿ ನಿಗಮ ಸ್ಥಾಪನೆಗೆ ಶೀಘ್ರವೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಅವರು ಕೆರೆಹಾಡಿಗೆ ಭೇಟಿ ನೀಡಿ ಅರಣ್ಯವಾಸಿಗಳ ಸಮಸ್ಯೆಗಳನ್ನು ಆಲಿಸಿ, ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ನೀಡಿದ ಸೂಚನೆ ಮತ್ತು ದೀರ್ಘಕಾಲದ ಪರಿಹಾರ ಬಯಸುವ ಸಮಸ್ಯೆಗಳ ಕುರಿತು ಮಾತನಾಡಿದರು.
ತಾವು ಅಲೆಮಾರಿಗಳಲ್ಲ. ಊರ ನಾಯಕರೂ ಅಲ್ಲ. ತಾವೆಲ್ಲರೂ ಕಾಡಲ್ಲೇ ಒಂದೇ ಕಡೆ ನೆಲೆಸಿರುವ ಆದಿವಾಸಿಗಳು. ಆದ್ದರಿಂದ ಅಲೆಮಾರಿ ಅಭಿವೃದ್ಧಿ ನಿಗಮದಲ್ಲಿ ತಮ್ಮನ್ನು ಸೇರಿಸಬೇಡಿ. ನಮಗೆ ಪ್ರತ್ಯೇಕವಾದ ಆದಿವಾಸಿ ಅಭಿವೃದ್ಧಿ ನಿಗಮ ಸ್ಥಾಪಿಸಿ ಎನ್ನುವ ಬೇಡಿಕೆ ಇಟ್ಟಿದ್ದಾರೆ. ಪ್ರತ್ಯೇಕ ಆದಿವಾಸಿ ನಿಗಮ ಸ್ಥಾಪನೆ ಸಂಬಂಧ ಆದಷ್ಟು ಶೀಘ್ರ ಕ್ರಮ ವಹಿಸುತ್ತೇನೆ. ನಮ್ಮಪ್ಪ ಕೂಡ ಜನಪದ ನೃತ್ಯ ಕಲಿಯೋಕೆ ನನ್ನನ್ನು ಹಾಕ್ಬಿಟ್ಟಿದ್ರು. ನಾನು ಹಠತೊಟ್ಟು ಕಾನೂನು ಪದವಿ ಮಾಡಿದ್ದಕ್ಕೆ ಇಂದು ಮುಖ್ಯಮಂತ್ರಿ ಆಗುವ ಮಟ್ಟಕ್ಕೆ ಬೆಳೆದೆ.ಈ ಆದಿವಾಸಿ ಸಮುದಾಯದ ಮಕ್ಕಳು ಕೂಡ ಅರ್ಧಕ್ಕೇ ಶಾಲೆ ನಿಲ್ಲಿಸದೆ ಶಿಕ್ಷಣ ಪಡೆಯಬೇಕು. ಆಗ ಮಾತ್ರ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತದೆ. ಮೊದಲು ನಾಲ್ಕನೇ ತರಗತಿವರೆಗೂ ಮಾತ್ರ ಆಶ್ರಮ ಶಾಲೆಗಳನ್ನು ನಾನು ಎಂಟನೇ ತರಗತಿವರೆಗೂ ವಿಸ್ತರಿಸಿದ್ದೆ. ಇದನ್ನು ಪಿಯುಸಿ ವರೆಗೂ ವಿಸ್ತರಿಸಿ ಎನ್ನುವುದು ಆದಿವಾಸಿಗಳು ಬೇಡಿಕೆಯಾಗಿದೆ, ಈ ಬಗ್ಗೆ ಸಭೆ ಕರೆದು ಪರಿಶೀಲನೆ ನಡೆಸುತ್ತೇನೆ ಎಂದರು.
ಪರಿಶಿಷ್ಟ ಪಂಗಡಗಳ ಒಳ ಮೀಸಲಾತಿ ಸಂಬಂಧ ಕಾನೂನು ತಜ್ಞರ ಜೊತೆ ಚರ್ಚೆ
ಪರಿಶಿಷ್ಟ ಜಾತಿಯವರ ಒಳ ಮೀಸಲಾತಿಗೆ ಮುಂದಾಗಿರುವ ರೀತಿಯಲ್ಲೇ , ಪರಿಶಿಷ್ಠ ವರ್ಗದವರ ಒಳ ಮೀಸಲಾತಿಗೆ ಕ್ರಮ ವಹಿಸಬೇಕು ಎನ್ನುವ ಬೇಡಿಕೆ ಇದೆ. ಆದರೆ ಎಸ್ ಸಿ ಒಳಮೀಸಲಾತಿ ಕುರಿತಂತೆ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಅದರ ಆಧಾರದಲ್ಲಿ ಮುಂದುವರೆದಿದ್ದೇವೆ. ಎಸ್ ಟಿ ಒಳ… pic.twitter.com/sfaJQTeB0v
— Siddaramaiah (@siddaramaiah) November 12, 2024