HomeKarnatakaಚುನಾವಣಾಧಿಕಾರಿ ಕಾರು ಅಡ್ದಗಟ್ಟಿ ಆಕ್ರೋಶ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಚುನಾವಣಾಧಿಕಾರಿ ಕಾರು ಅಡ್ದಗಟ್ಟಿ ಆಕ್ರೋಶ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರಸಭೆ ವಾರ್ಡ್ ನಂ.19ರ ಉಪಚುನಾವಣೆ ನಡೆಯುತ್ತಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಈ ಚುನಾವಣೆ ಪ್ರತಿಷ್ಠೆಯ ಅಖಾಡವಾಗಿದೆ.

ಬಿಜೆಪಿ ಸದಸ್ಯ ಶ್ರೀನಿವಾಸ್ ಸುರಪುರ ಅವರ ಅಕಾಲಿಕ ಮರಣದಿಂದ ತೆರವಾದ ಸ್ಥನಕ್ಕೆ ಉಪಚುನಾವಣೆ ನಡೆಯುತ್ತಿದೆ. ಬಿಜೆಪಿಯಿಂದ ನಾಗೇಶ್ ಮೇದಾರ್ ಹಾಗೂ ಕಾಂಗ್ರೆಸ್ ನಿಂದ ರತ್ನಾ ತಳವಾರ ನಾಮಪತ್ರ ಸಲ್ಲಿಸಿದ್ದಾರೆ.

ರತ್ನಾ ತಳವಾರ ನಾಮಪತ್ರ ಸಲ್ಲಿಕೆ ಬಳಿಕ ನಗರಸಭೆ ಮುಂಭಾಗ ಹೈಡ್ರಾಮಾ ನಡೆದಿದೆ. ರತ್ನಾ ತಳವಾರ ಸರಿಯಾಗಿ ನಾಮಪತ್ರ ಭರ್ತಿ ಮಾಡಿಲ್ಲ, ಆದರೂ ಅವರ ನಾಮಪತ್ರವನ್ನು ಅಂಗೀಕಾರ ಮಾಡಲಾಗಿದೆ ಎಂದು ಬಿಜೆಪಿ ಕರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚುನಾವಣಾ ಅಧಿಕರಿ ಕಾರು ತಡೆದು, ಅಧಿಕರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಥಳಕ್ಕಾಗಮಿಸಿದ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ನಿಯಂತ್ರಿಸಿ ವಶಕ್ಕೆ ಪಡೆದಿದ್ದಾರೆ. ನ.23ರಂದು ಮತದಾನ ನಡೆಯಲಿದೆ.

For Latest News Updates, Join Our Whatsapp Community🚩
RELATED ARTICLES

Most Popular