alex Certify ‘ಹೆಣ್ಣು ಮಕ್ಕಳು’ ಶಿಕ್ಷಣದಲ್ಲಿ ಎಲ್ಲರಿಗಿಂತ ಮುಂದಿರುವುದು ಸಂತೋಷದ ವಿಚಾರ : CM ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಹೆಣ್ಣು ಮಕ್ಕಳು’ ಶಿಕ್ಷಣದಲ್ಲಿ ಎಲ್ಲರಿಗಿಂತ ಮುಂದಿರುವುದು ಸಂತೋಷದ ವಿಚಾರ : CM ಸಿದ್ದರಾಮಯ್ಯ

ಬೆಂಗಳೂರು : ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಎಲ್ಲರಿಗಿಂತ ಮುಂದಿರುವುದು ಸಂತೋಷದ ವಿಚಾರ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಮತ್ತು ಕಲಾ ಕಾಲೇಜಿನ ನೂತನ ವಸತಿ ನಿಲಯ ಹಾಗೂ ವಿಜ್ಞಾನ ಕಾಲೇಜಿನ ಕಟ್ಟಡ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಹಿಂದೆ ಶೂದ್ರ ಸಮುದಾಯಗಳಂತೆ ಇಡೀ ಮಹಿಳಾ ಕುಲವನ್ನೂ ಶಿಕ್ಷಣದಿಂದ ವಂಚಿತರಾಗುವಂತೆ ಮಾಡಲಾಗಿತ್ತು. ಈಗ ಹೆಣ್ಣು ಮಕ್ಕಳೇ ಶಿಕ್ಷಣದಲ್ಲಿ ಎಲ್ಲರಿಗಿಂತ ಮುಂದಿದ್ದಾರೆ ಎಂಬುದು ಸಂತೋಷದ ವಿಚಾರ. ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಮತ್ತು ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಕಾರ್ಯಕ್ರಮಗಳನ್ನು, ಗ್ಯಾರಂಟಿಗಳನ್ನು ನಾವು ಜಾರಿಗೆ ತಂದಿದ್ದೇವೆ. ವಿದ್ಯಾರ್ಥಿನಿಯರು ಬಸ್ ಗಳಲ್ಲಿ ಉಚಿತವಾಗಿ ಓಡಾಡುತ್ತಿದ್ದೀರಿ ಅಲ್ವಾ?
ಇಲ್ಲಿಯವರೆಗೂ 325 ಕೋಟಿ ಫ್ರೀ ಟಿಕೆಟ್ ಮೂಲಕ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಶಿಕ್ಷಣದಿಂದ ಮಾತ್ರ ಮಹಿಳೆಯರು, ಯುವತಿಯರು ಸ್ವಾಭಿಮಾನಿ ಮತ್ತು ಸ್ವಾವಲಂಬಿಗಳಾಗಲು ಸಾಧ್ಯ. ಮಹಿಳೆಯರಿಗೆ ಮೊದಲಿಗೆ ಶಿಕ್ಷಣಕ್ಕೆ ಅವಕಾಶ ಕಲ್ಪಿಸಿದ್ದು ಬಸವಣ್ಣನರಾದರೆ, ಶಿಕ್ಷಣ ಮಹಿಳೆಯರ ಹಕ್ಕಾಗಿಸಿದ್ದು ಡಾ.ಬಿ.ಆರ್.ಅಂಬೇಡ್ಕರ್ ಅವರು. ಆದ್ದರಿಂದ ನೀವೆಲ್ಲಾ ಜಾತ್ಯತೀತರಾಗಿ, ವಿಶ್ವ ಮಾನವರಾಗಿ ಬೆಳೆದು ವೈಚಾರಿಕ ಚಿಂತನೆ ಬೆಳೆಸಿಕೊಳ್ಳಬೇಕು. ಶಿಕ್ಷಣ ಕಲಿತೂ ಜಾತಿವಾದಿಗಳಾದರೆ ಏನು ಪ್ರಯೋಜನ? ಎಂದರು.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...