ಬೆಂಗಳೂರು: ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಹಾಗೂ ವೈಚಾರಿಕತೆ ಹೆಚ್ಚಿಸಲು ರಾಜ್ಯ ಸರ್ಕಾರ ಅದ್ಯತೆ ನೀಡುತ್ತಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಭೋಸರಾಜು ಅವರು ತಿಳಿಸಿದ್ದಾರೆ.
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬಾಬು ಜಗಜೀವನರಾಮ್ ಸಂಶೋಧನಾ ಸಂಸ್ಥೆಯಲ್ಲಿ ಏರ್ಪಡಿಸಿದ್ದ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಸಚಿವರು ಸಾಂಕೇತಕರವಾಗಿ ಎರಡು ವಸತಿ ಶಾಲೆಗಳಿಗೆ ಟೆಲಿಸ್ಕೋಪ್ ನೀಡಿದ್ದಾರೆ.
ಮೊದಲ ಹಂತದಲ್ಲಿ 833 ವಸತಿ ಶಾಲೆಗಳಿಗೆ ಟೆಲಿಸ್ಕೋಪ್ ನೀಡಲಾಗುತ್ತಿದೆ. ಮಕ್ಕಳು ಬಾಹ್ಯಾಕಾಶ ಕ್ಷೇತ್ರದ ಬಗ್ಗೆ ಆಸಕ್ತಿ ಹೆಚ್ಚಿಸಿಕೊಳ್ಳಬೇಕು ಮತ್ತು ಆ ಕ್ಷೇತ್ರದಲ್ಲಿ ಸಂಶೋಧನೆಗೆ ಪ್ರೋತ್ಸಾಹ ನೀಡುವ ಉದ್ದೇಶ ಹೊಂದಿದ್ದೇವೆ ಎಂದು ತಿಳಿಸಿದ್ದಾರೆ.
ಇಸ್ರೋ ಅಧ್ಯಕ್ಷ ಸೋಮನಾಥ್ ಬಾಹ್ಯಾಕಾಶಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರಿಸಿ ಮಕ್ಕಳೊಂದಿಗೆ ಸಂವಾದ ನಡೆಸಿದ್ದು, ಮಕ್ಕಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಬಗ್ಗೆ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಟೆಲಿಸ್ಕೋಪ್ ನೀಡುವ ಯೋಜನೆ ಬಹಳ ವಿಶೇಷವಾಗಿದೆ. ಇದು ಭವಿಷ್ಯದಲ್ಲಿ ವೈಜ್ಞಾನಿಕ ಕ್ಷೇತ್ರಕ್ಕೆ ಉತ್ತಮ ಕೊಡುಗೆ ನೀಡಲಿದೆ ಎಂದು ಹೇಳಿದ್ದಾರೆ.