HomeKarnatakaBREAKING: ಚಲಿಸುತ್ತಿದ್ದ ಕಾರ್ ಟೈಯರ್ ಸ್ಪೋಟಗೊಂಡು ಮರಕ್ಕೆ ಡಿಕ್ಕಿ: ಸ್ಥಳದಲ್ಲೇ ಓರ್ವ ಸಾವು

BREAKING: ಚಲಿಸುತ್ತಿದ್ದ ಕಾರ್ ಟೈಯರ್ ಸ್ಪೋಟಗೊಂಡು ಮರಕ್ಕೆ ಡಿಕ್ಕಿ: ಸ್ಥಳದಲ್ಲೇ ಓರ್ವ ಸಾವು

ತುಮಕೂರು: ಚಲಿಸುತ್ತಿದ್ದ ಕಾರ್ ನ ಟೈಯರ್ ಸ್ಪೋಟವಾಗಿ ಮರಕ್ಕೆ ಡಿಕ್ಕಿಯಾಗಿದ್ದು, ಓರ್ವ ಸಾವನ್ನಪ್ಪಿದ ಘಟನೆ ರಾಜೇಂದ್ರಪುರ ಗೇಟ್ ಬಳಿ ರಾಜ್ಯ ಹೆದ್ದಾರಿ 33ರಲ್ಲಿ ಸಂಭವಿಸಿದೆ.

ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ರಾಜೇಂದ್ರಪುರ ಗೇಟ್ ಬಳಿ ಅಪಘಾತ ಸಂಭವಿಸಿದೆ. ತುಮಕೂರಿನಲ್ಲಿ ಮದುವೆ ಮುಗಿಸಿ ಕಾರ್ ನಲ್ಲಿ ಮಂಡ್ಯಕ್ಕೆ ತೆರಳುತ್ತಿದ್ದ ಮಂಡ್ಯ ಮೂಲದ 28 ವರ್ಷದ ಆಕರ್ಷ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೂವರು ಗಾಯಾಳುಗಳನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಆಕರ್ಷ್ ಶವವನ್ನು ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಹುಲಿಯೂರುದುರ್ಗ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular