ಹುಬ್ಬಳ್ಳಿ: ಡಾ. ಬಿ.ಆರ್. ಅಂಬೇಡ್ಕರ್ ಇಸ್ಲಾಂ ಧರ್ಮಕ್ಕೆ ಸೇರಲು ಚಿಂತನೆ ನಡೆಸಿದ್ದರು ಎಂದು ಕಾಂಗ್ರೆಸ್ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಅವರು ನೀಡಿದ ಹೇಳಿಕೆ ಖಂಡಿಸಿ ಹಳೇಹುಬ್ಬಳ್ಳಿ ಪೊಲೀಸ್ ಠಾಣೆಗೆ ಮಂಜುನಾಥ ತೇರದಾಳ ಎಂಬುವರು ದೂರು ನೀಡಿದ್ದಾರೆ.
ಅಜ್ಜಂಪೀರ್ ಖಾದ್ರಿ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ದೂರು ಸಲ್ಲಿಸಲಾಗಿದೆ. ಖಾದ್ರಿಯವರು ಅಂಬೇಡ್ಕರ್ ಅವರ ಚಾರಿತ್ರ್ಯಹರಣ ಮಾಡಿದ್ದಾರೆ. ಅವರನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿ ದೂರು ನೀಡಲಾಗಿದೆ. ಅಂಬೇಡ್ಕರ್ ಅವರು ಇಸ್ಲಾಂ ಧರ್ಮಕ್ಕೆ ಸೇರುತ್ತೇನೆ ಎಂದು ಹೇಳಿರಲಿಲ್ಲ. ಯಾವುದೇ ಆಧಾರವಿಲ್ಲದೆ ಹೇಳಿಕೆ ನೀಡಿರುವ ಖಾದ್ರಿಯವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಹಳೆಹುಬ್ಬಳ್ಳಿ ಪೊಲೀಸ್ ಠಾಣೆಗೆ ಮಂಜುನಾಥ ತೇರದಾಳ ದೂರು ಸಲ್ಲಿಸಿದ್ದಾರೆ.