HomeKarnatakaBREAKING: ಸಚಿವ ಜಮೀರ್ ಅಹಮ್ಮದ್ ಗೆ ನಿಂದನೆ: ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ಅರೆಸ್ಟ್

BREAKING: ಸಚಿವ ಜಮೀರ್ ಅಹಮ್ಮದ್ ಗೆ ನಿಂದನೆ: ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ಅರೆಸ್ಟ್

ಬೆಂಗಳೂರು: ಧರ್ಮ, ಜಾತಿಯ ಹೆಸರಲ್ಲಿ ಸಚಿವ ಜಮೀರ್ ಅಹಮ್ಮದ್ ಖಾನ್ ಅವರನ್ನು ನಿಂದಿಸಿದ ಆರೋಪದ ಮೇಲೆ ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪುನೀತ್ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪೋಸ್ಟ್ ಮಾಡಿ ಸಚಿವ ಜಮೀರ್ ಅಹ್ಮದ್ ಅವರನ್ನು ನಿಂದಿಸಿದ್ದರು. ಜಮೀರ್ ಅಹ್ಮದ್ ಅವರ ಆಪ್ತ ಕಾರ್ಯದರ್ಶಿ ಈ ಕುರಿತಾಗಿ ದೂರು ನೀಡಿದ್ದರು.

ಪುನೀತ್ ಧರ್ಮ -ಧರ್ಮಗಳ ನಡುವೆ ಸಂಘರ್ಷ ಸೃಷ್ಟಿಸುವ ಹೇಳಿಕೆ ನೀಡಿದ್ದಾರೆ ಎಂದು ಜಮೀರ್ ಅಹ್ಮದ್ ಖಾನ್ ಅವರ ಪಿಎಸ್ ದೂರು ನೀಡಿದ್ದು, ಇದನ್ನು ಆಧರಿಸಿ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪುನೀತ್ ಅವರನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ಪೊಲೀಸರು ಹಾಜರುಪಡಿಸಿದ್ದಾರೆ. ಪುನೀತ್ ಕೆರೆಹಳ್ಳಿಯನ್ನು ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ವಹಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular