ಬೆಂಗಳೂರು: ಮೂರು ತಿಂಗಳಿಂದ ವೇತನ ನೀಡದ ಹಿನ್ನಲೆಯಲ್ಲಿ 108 ಆಂಬುಲೆನ್ಸ್ ನೌಕರರು ಮತ್ತೆ ಹೋರಾಟ ಕೈಗೊಂಡಿದ್ದಾರೆ.
ಆಂಬ್ಯುಲೆನ್ಸ್ ಸಿಬ್ಬಂದಿಗೆ ಆರೋಗ್ಯ ಇಲಾಖೆ ಕಳೆದ ಮೂರು ತಿಂಗಳಿಂದ ವೇತನ ನೀಡಿಲ್ಲ. ಹೀಗಾಗಿ ಸಂಬಳ ನೀಡದ ಹಿನ್ನೆಲೆಯಲ್ಲಿ ಮತ್ತೆ ಹೋರಾಟ ಕೈಗೊಳ್ಳಲು ಆಂಬುಲೆನ್ಸ್ ಸಿಬ್ಬಂದಿ ಮುಂದಾಗಿದ್ದಾರೆ. ಶನಿವಾರದೊಳಗೆ ವೇತನ ನೀಡದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ವೇತನ ನೀಡದಿದ್ದರೆ ಸೇವೆಗೆ ಹಾಜರಾಗದಿರಲು 108 ಆಂಬುಲೆನ್ಸ್ ಸಿಬ್ಬಂದಿ ಮುಂದಾಗಿದ್ದು, ಇಂದು ಸರ್ಕಾರಕ್ಕೆ ಮನವಿ ಸಲ್ಲಿಸಲಿದ್ದಾರೆ. ನೌಕರರು ಹೋರಾಟ ಕೈಗೊಂಡಲ್ಲಿ ಆಂಬ್ಯುಲೆನ್ಸ್ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.