HomeEntertainment50 ದಿನ ಪೂರೈಸಿದ 'ದೇವರ'

50 ದಿನ ಪೂರೈಸಿದ ‘ದೇವರ’

ಸೆಪ್ಟೆಂಬರ್ 27 ರಂದು ಬಿಡುಗಡೆಯಾಗಿದ್ದ ಜೂನಿಯರ್ ಎನ್ಟಿಆರ್ ಅಭಿನಯದ ‘ದೇವರ’ ಚಿತ್ರ ಅಂದುಕೊಂಡಂತೆ ಭರ್ಜರಿ ಯಶಸ್ಸು ಕಂಡಿದ್ದು, ಬಾಕ್ಸ್ ಆಫೀಸ್ನಲ್ಲಿ ಒಳ್ಳೆಯ ಗಳಿಕೆ ಮಾಡಿದೆ. ಕೆಲವು ಚಿತ್ರಮಂದಿರಗಳಲ್ಲಿ ಇನ್ನೂ ಪ್ರದರ್ಶನ ಕಾಣುತ್ತಿದ್ದು,  ಇದೀಗ 50 ದಿನಗಳನ್ನು ಪೂರೈಸಿದೆ. ಈ ಸಂತಸವನ್ನು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ  ಪ್ರೇಕ್ಷಕರಿಗೆ ಧನ್ಯವಾದ ತಿಳಿಸಿದೆ.

ಈ ಚಿತ್ರದಲ್ಲಿ ಜೂನಿಯರ್ ಎನ್ಟಿಆರ್ ಗೆ ಜೋಡಿಯಾಗಿ ಜಾನ್ವಿ ಕಪೂರ್ ಅಭಿನಯಿಸಿದ್ದು, ಸೈಫ್ ಅಲಿ ಖಾನ್, ಜರೀನಾ ವಹಾಬ್, ಪ್ರಕಾಶ್ ರಾಜ್, ಶ್ರೀಕಾಂತ್, ಮುರಳಿ ಶರ್ಮಾ, ಅಜಯ್, ಅಭಿಮನ್ಯು ಸಿಂಗ್, ಹರಿ ತೇಜ, ಉಳಿದ ಪಾತ್ರ ವರ್ಗದಲ್ಲಿದ್ದಾರೆ.  ಯುವ ಸುಧಾ ಆರ್ಟ್ಸ್ ಹಾಗೂ  ಎನ್ಟಿಆರ್ ಆರ್ಟ್ಸ್ ಬ್ಯಾನರ್ ನಲ್ಲಿ ಸುಧಾಕರ ಮಿಕ್ಕಿಲಿನೇನಿ, ಕೊಸರಾಜು ಹರಿಕೃಷ್ಣ, ನಿರ್ಮಾಣ ಮಾಡಿದ್ದು, ಅನಿರುದ್ಧ ರವಿಚಂದರ್ ಸಂಗೀತ ಸಂಯೋಜನೆ ನೀಡಿದ್ದಾರೆ. ಎ.ಶ್ರೀಕರ್ ಪ್ರಸಾದ್ ಸಂಕಲನ, ಆರ್.ರತ್ನವೇಲು ಛಾಯಾಗ್ರಹಣವಿದೆ.

 

 

 

For Latest News Updates, Join Our Whatsapp Community🚩
RELATED ARTICLES

Most Popular