alex Certify BIG NEWS: ಪೊಲೀಸ್ ಅಧಿಕಾರಿಗಳ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆಸೃಷ್ಟಿಸಿ ವಂಚನೆಗೆ ಯತ್ನ: ಆರೋಪಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪೊಲೀಸ್ ಅಧಿಕಾರಿಗಳ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆಸೃಷ್ಟಿಸಿ ವಂಚನೆಗೆ ಯತ್ನ: ಆರೋಪಿ ಅರೆಸ್ಟ್

ಬೆಳಗಾವಿ: ಐಪಿಎಸ್ ಅಧಿಕಾರಿಗಳ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿ ವಂಚನೆಗೆ ಯತ್ನಿಸುತ್ತಿದ್ದ ಆರೋಪಿಯನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.

ರಾಜಸ್ಥಾನ ಮೂಲದ ಅರ್ಬಾಜ್ ಖಾನ್ ಬಂಧಿತ ಆರೋಪಿ. ಅರ್ಬಾಜ್ ಖಾನ್ ಬೆಳಗಾವಿ ಎಸ್ ಪಿ ಭೀಮಾಶಂಕರ್ ಗುಳೇದ್, ಗದಗ ಜಿಲ್ಲಾ ಎಸ್ ಪಿ ನೇಮಗೌಡ, ಮಂಡ್ಯ ಜಿಲ್ಲಾ ಎಸ್ ಪಿ ಮಲ್ಲಿಕಾರ್ಜುನ ಅವರ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿ, ಫ್ರೆಂಡ್ಸ್ ರಿಕ್ವೆಸ್ಟ್ ಕಳುಹಿಸುತ್ತಿದ್ದ.

ಬಳಿಕ ಹುಟ್ಟು ಹಬ್ಬ ಇದೆ ಎಂದು ಪೋಸ್ಟ್ ಹಾಕುತ್ತಿದ್ದ. ಶುಭಾಷಯ ತಿಳಿಸಿದವರನ್ನು ಟಾರ್ಗೆಟ್ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದ. ವಿಷಯ ತಿಳಿಯುತ್ತಿದ್ದಂತೆ ಬೆಳಗಾವಿ ಎಸ್ ಪಿ ಭೀಮಾಶಂಕರ್ ಗುಳೇದ್ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಸದ್ಯ ಆರೋಪಿ ಅರ್ಬಾಜ್ ಖಾನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಅಧಿಕಾರಿಗಳ ಹೆಸರಲ್ಲಿ ಫೇಸ್ ಬುಕ್ ಮೂಲಕ ಹಣಕ್ಕೆ ಬೇಡಿಕೆ ಇಟ್ಟರೆ ಅಥವಾ ಸಂಶಯಾಸ್ಪದ ಸಂದೇಶ ಬಂದಲ್ಲಿ ಸಾರ್ವಜನಿಕರು ಜಾಗೃತರಾಗಿ, ಪೊಲೀಸರಿಗೆ ದೂರು ನೀಡಿವಂತೆ ಎಸ್ ಪಿ ಭೀಮಾಶಮ್ಕರ್ ಗುಳೇದ್ ಮನವಿ ಮಾಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...