HomeKarnatakaBREAKING NEWS: ಲಂಚಕ್ಕೆ ಕೈಯೊಡ್ಡಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಇನ್ಸ್ ಪೆಕ್ಟರ್

BREAKING NEWS: ಲಂಚಕ್ಕೆ ಕೈಯೊಡ್ಡಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಇನ್ಸ್ ಪೆಕ್ಟರ್

ಬೆಂಗಳೂರು: 2 ಲಕ್ಷ ಲಂಚ ಪಡೆಯುತ್ತಿದ್ದಾಗ ಪೊಲೀಸ್ ಇನ್ಸ್ ಪೆಕ್ಟರ್ ಓರ್ವ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಅರುಣ್ ಕುಮಾರ್ ಜಿ.ವಿ ಲೋಕಾಯುಕ್ತ ಬಲೆಗೆ ಬಿದ್ದ ಬಿಎಂಟಿಎಫ್ ಪೊಲೀಸ್ ಇನ್ಸ್ ಪೆಕ್ಟರ್. ಶ್ರೀದೇವಿ ಎಂಬುವವರ ಕೇಸ್ ಕ್ಲೋಸ್ ಮಾಡಲು ಇನ್ಸ್ ಪೆಕ್ಟರ್ ಲಂಚಕ್ಕೆ ಬೇದಿಕೆ ಇಟ್ಟಿದ್ದರು. ಕಾಡುಗೋಡಿ ನಿವಾಸಿ ಪರಮೇಶ್ ಎಂಬುವವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ಥಣಿಸಂದ್ರದ ಬಳಿ ಇನ್ಸ್ ಪೆಕ್ಟರ್ ಸ್ನೇಹಿತ ನಂದೀಶ್ ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಎಸ್ ಪಿ ಶ್ರೀನಾಥ್ ಜೋಶಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಈ ವೇಳೆ ಇನ್ಸ್ ಪೆಕ್ಟರ್ ಅರುಣ್ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular