ಬೆಂಗಳೂರು: ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಕಿತ್ತನಹಳ್ಳಿಯ ವಿಭಾ ಇಂಟರ್ನ್ಯಾಷನಲ್ ಶಾಲೆಯ ಮಾಲೀಕ ಈರತ್ತಯ್ಯನನ್ನು ಪೊಲೀಸರು ಬಂಧಿಸಿದ್ದಾರೆ.
ಕಳೆದ ನಾಲ್ಕು ತಿಂಗಳಿಂದ ಹೆಣ್ಣುಮಕ್ಕಳಿಗೆ ಪದೇಪದೇ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ವಿದ್ಯಾರ್ಥಿನಿಯರನ್ನು ತನ್ನ ಕ್ಯಾಬಿನ್ ಗೆ ಕರೆಸಿಕೊಂಡು ಅಂಗಾಂಗ ಮುಟ್ಟಿ ವಿಕೃತಿ ತೋರಿಸಿದ್ದಾನೆ. ಶಾಲಾ ಬಸ್ ನಲ್ಲಿ ಹಿಂದಿ ಸೀಟಿಗೆ ಕರೆಸಿಕೊಂಡು ಕಿರುಕುಳ ನೀಡಿದ್ದನೆನ್ನಲಾಗಿದ್ದು, ಈ ಬಗ್ಗೆ ನೊಂದ ವಿದ್ಯಾರ್ಥಿನಿಯರು ದೂರು ದಾಖಲಿಸಿದ್ದು, ಮಾದನಾಯಕನಹಳ್ಳಿ ಠಾಣೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಿಸಿ ಆರೋಪಿಯನ್ನು ಬಂಧಿಸಿ ಜೈಲಿಗೆ ಕಳಿಸಿದ್ದಾರೆ.