ಬೆಂಗಳೂರು: ಗ್ರಾಮೀಣಾಭಿವೃದ್ಧಿ ಇಲಾಖೆಯ ಕಲ್ಯಾಣ ಕರ್ನಾಟಕ ವೃಂದದ 97 ಪಿಡಿಒ ಹುದ್ದೆಗಳ ನೇಮಕಾತಿಗೆ ಕಲ್ಯಾಣ ಕರ್ನಾಟಕ ಭಾಗದ 298 ಪರೀಕ್ಷಾ ಉಪ ಕೇಂದ್ರಗಳಲ್ಲಿ ಇಂದು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ.
ಕಡ್ಡಾಯ ಕನ್ನಡ ಪರೀಕ್ಷೆಗೆ 74,150 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಬೀದರ್ ಕಲಬುರಗಿ, ಯಾದಗಿರಿ, ರಾಯಚೂರು, ವಿಜಯನಗರ, ಬಳ್ಳಾರಿ, ಕೊಪ್ಪಳ ಜಿಲ್ಲಾ ಕೇಂದ್ರಗಳು, ಬಾಲ್ಕಿ, ಜೇವರ್ಗಿ, ಶಹಾಪುರ, ಸಿಂಧನೂರು, ಹಗರಿಬೊಮ್ಮನಹಳ್ಳಿ, ಕೂಡ್ಲಿಗಿ, ಗಂಗಾವತಿ, ಕುಷ್ಟಗಿ ತಾಲೂಕು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷಾ ಕೇಂದ್ರಗಳಲ್ಲಿ ನವೆಂಬರ್ 17ರ ಭಾನುವಾರ ಪಿಡಿಒ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. 99,107 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ ಎಂದು ಕರ್ನಾಟಕ ಲೋಕಸೇವಾ ಆಯೋಗ ತಿಳಿಸಿದೆ.