ತೆಲಂಗಾಣ : 12 ವರ್ಷದ ಬಾಲಕಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಚೆನ್ನೂರು ಪಟ್ಟಣದಲ್ಲಿ ನಡೆದಿದೆ.
ಚೆನ್ನೂರು ಪಟ್ಟಣದ ಸ್ಥಳೀಯ ಶಾಲೆಯಲ್ಲಿ 7 ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬಾಲಕಿ ಏಕಾಏಕಿ ಮನೆಯಲ್ಲಿ ಕುಸಿದು ಮೃತಪಟ್ಟಿದ್ದಾಳೆ. ಕೂಡಲೇ ಪೋಷಕರು ಬಾಲಕಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಾಗಲೇ ಬಾಲಕಿ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ.
ಇತ್ತೀಚೆಗೆ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, 7 ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ.