ಹಾಸನ: ವಿವಿಧ ಯೋಜನೆಗಳಲ್ಲಿ ಕೋಟ್ಯಂತರ ರೂಪಾಯಿ ದುರುಪಯೋಗ ಪಡಿಸಿಕೊಂಡಿರುವ ಗ್ರಾಮ ಪಂಚಾಯಿತಿ ಕಾರ್ಯದರ್ಶಿಯನ್ನು ಅಮಾನತು ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ.
ಬಿ.ಎನ್.ಭುವನ್ ಅಮಾನತುಗೊಂಡಿರುವ ಕಾರ್ಯದರ್ಶಿ. ಅರಕಲಗೋಡು ತಾಲೂಕಿನ ಕೊಣನೂರು ಗ್ರಾಮಪಂಚಾಯಿತಿ ಕಾರ್ಯದರ್ಶಿಯಾಗಿದ್ದ ಭುವನ್, ವಿವಿಧ ಯೋಜನೆಗಳ 1.49 ಕೋಟಿ ರೂಪಾಯಿ ದುರುಪಯೋಗ ಪಡಿಸಿಕೊಂಡಿರುವ ಆರೋಪವಿದೆ.
ಭುವನ್ ಕೊಣನೂರು ಜೊತೆ ಗಂಗೂರು ಗ್ರಾಮ ಪಂಚಾಯಿತಿಯ ಪ್ರಭಾರ ಕಾರ್ಯದರ್ಶಿಯೂ ಆಗಿದ್ದ. 15ನೇ ಹಣಕಾಸು ಗ್ರಾಮ ಪಂಚಾಯಿತಿ ಸ್ವಂತ ಸಂಪನ್ಮೂಲ, ಸಿಬ್ಬಂದಿ ವೇತನ, ಖಾತೆ, ಗ್ರಾಮ ವಿಕಾಸ ಯೋಜನೆಯ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ.
ನಿಯಮಬಾಹಿರವಾಗಿ 1.49 ಕೋಟಿ ಹಣ ದುರುಪಯೋಗವಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಈ ಹಿನ್ನೆಲೆಯಲ್ಲಿ ಭುವನ್ ಅವರನ್ನು ಅಮಾನತುಗೊಳಿಸಿ, ವಿಚಾರಣೆಗೆ ಕಾಯ್ದಿರಿಸಿ ಜಿಲ್ಲಾ ಪಂಚಾಯತ್ ಸಿಇಒ ಬಿ.ಆರ್.ಪೂರ್ಣಿಮಾ ಆದೇಶ ಹೊರಡಿಸಿದ್ದಾರೆ.