HomeIndiaಶಿರೋಮಣಿ ಅಕಾಲಿದಳ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಸುಖಬೀರ್ ಸಿಂಗ್ ಬಾದಲ್: ಕಾರ್ಯಕಾರಿ ಸಮಿತಿಗೆ ರಾಜೀನಾಮೆ

ಶಿರೋಮಣಿ ಅಕಾಲಿದಳ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಸುಖಬೀರ್ ಸಿಂಗ್ ಬಾದಲ್: ಕಾರ್ಯಕಾರಿ ಸಮಿತಿಗೆ ರಾಜೀನಾಮೆ

ನವದೆಹಲಿ: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಸುಖಬೀರ್ ಸಿಂಗ್ ಬಾದಲ್ ಪಕ್ಷದ ಕಾರ್ಯಕಾರಿ ಸಮಿತಿಗೆ ರಾಜೀನಾಮೆ ಸಲ್ಲಿಸಿದ್ದಾರೆ

ಶನಿವಾರ ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ಸುಖಬೀರ್ ಸಿಂಗ್ ಬಾದಲ್ ನಿರ್ಧರಿಸಿ ಪಕ್ಷದ ಕಾರ್ಯಕಾರಿ ಸಮಿತಿಗೆ ರಾಜೀನಾಮೆ ಸಲ್ಲಿಸಿದ್ದು, ಹೊಸ ಅಧ್ಯಕ್ಷರ ಆಯ್ಕೆಗೆ ದಾರಿ ಮಾಡಿಕೊಟ್ಟಿದ್ದಾರೆ.

ಪಂಜಾಬ್‌ನ ಮಾಜಿ ಶಿಕ್ಷಣ ಸಚಿವ ಡಾ. ದಲ್ಜಿತ್ ಎಸ್. ಚೀಮಾ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಎಸ್‌ಎಡಿ ಅಧ್ಯಕ್ಷ ಎಸ್. ಸುಖಬೀರ್ ಸಿಂಗ್ ಬಾದಲ್ ಅವರು ಹೊಸ ಅಧ್ಯಕ್ಷರ ಆಯ್ಕೆಗೆ ದಾರಿ ಮಾಡಿಕೊಡಲು ಇಂದು ಪಕ್ಷದ ಕಾರ್ಯಕಾರಿ ಸಮಿತಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ತಮ್ಮ ನಾಯಕತ್ವದಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಕ್ಕಾಗಿ ಮತ್ತು ಅಧಿಕಾರಾವಧಿಯುದ್ದಕ್ಕೂ ಪೂರ್ಣ ಹೃದಯದಿಂದ ಬೆಂಬಲ ಮತ್ತು ಸಹಕಾರವನ್ನು ನೀಡಿದ್ದಕ್ಕಾಗಿ ಅವರು ಪಕ್ಷದ ಎಲ್ಲಾ ನಾಯಕರು ಮತ್ತು ಕಾರ್ಯಕರ್ತರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜುಲೈನಲ್ಲಿ ಚಂಡೀಗಢದಲ್ಲಿ ನಡೆದ ಸಭೆಯ ನಂತರ ಶಿರೋಮಣಿ ಅಕಾಲಿದಳ(SAD) ತನ್ನ ಕೋರ್ ಕಮಿಟಿಯನ್ನು ವಿಸರ್ಜಿಸಿತ್ತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular