ಇಂಫಾಲ್: ಮಣಿಪುರ ಸಿಎಂ ಬಿರೇನ್ ಸಿಂಗ್ ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ. ಆರು ಮಂದಿ ಪ್ರತಿಭಟನಾಕಾರರನ್ನು ಹತ್ಯೆಗೈದ ನಂತರ ಪ್ರತಿಭಟಿಸಿದ ಗುಂಪೊಂದು ಶನಿವಾರ ಮಣಿಪುರ ಸಿಎಂ ಎನ್ ಬಿರೇನ್ ಸಿಂಗ್ ಅವರ ಮನೆ ಮೇಲೆ ದಾಳಿ ಮಾಡಿದೆ.
ಇದಕ್ಕೂ ಮುನ್ನ ಪ್ರತಿಭಟನಾಕಾರರು ರಾಜ್ಯದ ಮೂವರು ಸಚಿವರು ಮತ್ತು ಆರು ಶಾಸಕರ ನಿವಾಸಗಳ ಮೇಲೆ ದಾಳಿ ನಡೆಸಿ ಆಸ್ತಿ ಪಾಸ್ತಿಗಳನ್ನು ಧ್ವಂಸಗೊಳಿಸಿದ್ದಾರೆ.
ಇಂಫಾಲ್ನ ವಿವಿಧ ಭಾಗಗಳಲ್ಲಿ ಪ್ರತಿಭಟನಾಕಾರರನ್ನು ಚದುರಿಸಲು ಭದ್ರತಾ ಪಡೆಗಳು ಅಶ್ರುವಾಯು ಶೆಲ್ಗಳನ್ನು ಹಾರಿಸಿದಾಗ ಪ್ರತಿಭಟನಾಕಾರರು ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ಅಳಿಯ ಸೇರಿದಂತೆ ಆರು ಶಾಸಕರ ಪೈಕಿ ಮೂವರ ಮನೆಗಳನ್ನು ಧ್ವಂಸ ಮಾಡಿ ಅವರ ಆಸ್ತಿಗಳಿಗೆ ಬೆಂಕಿ ಹಚ್ಚಿದರು ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಾಂತರಗೊಂಡವರ ಶಿಬಿರದಿಂದ ಸೋಮವಾರದಿಂದ ಕಾಣೆಯಾಗಿದ್ದ ಇಬ್ಬರು ಮಹಿಳೆಯರು ಮತ್ತು ಮಗುವಿನ ಶವಗಳನ್ನು ಶನಿವಾರ ಜಿರಿಬಾಮ್ನ ಬರಾಕ್ ನದಿಯಿಂದ ವಶಪಡಿಸಿಕೊಂಡ ನಂತರ ಉದ್ವಿಗ್ನತೆ ಉಲ್ಬಣಗೊಂಡಿದೆ,
ಇಂಟರ್ನೆಟ್ ಸ್ಥಗಿತ, ಕರ್ಫ್ಯೂ
ಸರ್ಕಾರವು ಐದು ಜಿಲ್ಲೆಗಳಲ್ಲಿ ಅನಿರ್ದಿಷ್ಟ ಅವಧಿಗೆ ನಿಷೇಧಾಜ್ಞೆಗಳನ್ನು ವಿಧಿಸಿದೆ ಮತ್ತು ರಾಜ್ಯದ ಕೆಲವು ಭಾಗಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದೆ.
ಇಂಫಾಲ್ ಕಣಿವೆಯ ಇಂಫಾಲ್ ಪೂರ್ವ ಮತ್ತು ಪಶ್ಚಿಮ, ಬಿಷ್ಣುಪುರ್, ತೌಬಾಲ್ ಮತ್ತು ಕಕ್ಚಿಂಗ್ ಜಿಲ್ಲೆಗಳಲ್ಲಿ “ಕಾನೂನು ಮತ್ತು ಸುವ್ಯವಸ್ಥೆ ಕಾರಣ ಅನಿರ್ದಿಷ್ಟ ಅವಧಿಗೆ ಕರ್ಫ್ಯೂ ಜಾರಿ ಮಾಡಲಾಗಿದೆ.