ಹೈದರಾಬಾದ್ ಪೊಲೀಸರು ಹಾಗೂ ಒಡಿಶಾ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆ ವೇಳೆ ಸಗಣಿ ರಾಶಿಯಲ್ಲಿ ಬಚ್ಚಿಟ್ಟಿದ್ದ 20 ಲಕ್ಷ ಹಣವನ್ನು ಜಪ್ತಿ ಮಾಡಿರುವ ಘಟನೆ ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ನಡೆದಿದೆ.
ಕುರ್ದಾ ಪೊಲೀಸ್ ಠಾಣೆ ವ್ಯಾಪ್ತಿಯ ಬಡಮಂಡರುಣಿ ಗ್ರಾಮದಲ್ಲಿ ವ್ಯಕ್ತಿಯೋರ್ವ ಹಸುವಿನ ಸಗಣಿಇಯ ರಾಶಿಯಲ್ಲಿ ಈ ಹಣವನ್ನು ಬಚ್ಚಿಟ್ಟಿದ್ದ.
ಹೈದರಾಬಾದ್ ನ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಗೋಪಾಲ್ ಎಂಬಾತ ಕಂಪನಿಯ ಲಾಕರ್ ನಲ್ಲಿಟ್ಟಿದ್ದ 20 ಲಕ್ಷ ಹಣ ಕದ್ದು ಪರಾರಿಯಾಗಿದ್ದ. ಬಳಿಕ ತನ್ನ ಸೋದರ ಮಾವ ರವೀಂದ್ರ ಬೆಹೆರಾ ಮೂಲಕ ಹಣವನ್ನು ಗ್ರಾಮಕ್ಕೆ ಕಳುಹಿಸಿದ್ದಾನೆ. ಬಗ್ಗೆ ಕಂಪನಿಯವರು ಹೈದರಾಬಾದ್ ಪೊಲೀಸರಿಗೆ ದೂರು ನೀಡಿದ್ದರು.
ಈ ಹಿನ್ನೆಲೆಯಲ್ಲಿ ಹೈದರಾಬಾದ್ ಪೊಲಿಸರು ಒಡಿಶಾ ಪೊಲೀಸರ ಸಹಕಾರದೊಂದಿಗೆ ಕುರ್ದಾ ಗ್ರಾಮದಲ್ಲಿ ರವೀಂದ್ರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಸಗಣಿ ರಾಶಿಯಲ್ಲಿ ಬಚ್ಚಿಟ್ಟಿದ್ದ 20 ಲಕ್ಷ ಹಣವನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳಾದ ಗೋಪಾಲ್ ಹಾಗೂ ರವೀಂದ್ರ ಇಬ್ಬರೂ ತಲೆ ಮರೆಸಿಕೊಂಡಿದ್ದು, ಗೋಪಾಲ್ ಕುಟುಂಬದ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.