ಬೆಂಗಳೂರು: ಬೆಂಗಳೂರಿನಲ್ಲಿ ಲಕ್ಷ್ಮೀ ಭುವನೇಶ್ವರಿ ದೇವಿ ವಿಗ್ರಹ ವಿರೂಪಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಜೀವನ್ ಭೀಮಾ ನಗರದಲ್ಲಿ ಗುರುವಾರ ರಾತ್ರಿ ಲಕ್ಷ್ಮೀ ಭುವನೇಶ್ವರಿ ದೇಗುಲದಲ್ಲಿ ದೇವಿ ವಿಗ್ರಹ ವಿರೂಪಗೊಳಿಸಲಾಗಿತ್ತು. ಕಿಡಿಗೇಡಿಗಳ ಕೃತ್ಯ ಕಂಡು ಶಾಕ್ ಆದ ಭಕ್ತರು ಪೊಲೀಸರಿಗೆ ದೂರು ನೀಡಿದ್ದರು. ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು,ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿ ವಶಕ್ಕೆ ಪಡೆದಿದ್ದಾರೆ.
ಆರೋಪಿ ಓರ್ವ ಅಪ್ರಾಪ್ತ ಬಾಲಕನಾಗಿದ್ದಾನೆ. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ದೇವರ ಮೇಲೆ ಕೋಪಗೊಂಡು ಲಕ್ಷ್ಮೀ ಭುವನೇಶ್ವರಿ ದೇವಿಯ ವಿಗ್ರಹವನ್ನು ವಿರೂಪಗೊಳಿಸಿದ್ದಾನಂತೆ. ಬಾಲಕ ಅಪಾರ ದೈವ ಭಕ್ತನಾಗಿದ್ದ. ಪರೀಕ್ಷೆಯಲ್ಲಿ ಮೂರು ವಿಷಯದಲ್ಲಿ ಫೇಲ್ ಆಗಿದ್ದಾನೆ. ಇದರಿಂದ ಬೇಸರಗೊಂಡು ದೇವರ ವಿಗ್ರಹವನ್ನೇ ವಿರೂಪಗೊಳಿಸಿ ತೆರಳಿದ್ದಾಗಿ ಪೊಲೀಸರ ವಿಚಾರಣೆ ವೇಳೆ ಬಾಲಕ ಬಾಯ್ಬಿಟ್ಟಿದ್ದಾನೆ. ಬಾಲಕನ ಅವಾಂತರಕ್ಕೆ ಪೊಲೀಸರೇ ಹೈರಾಣಾಗಿದ್ದಾರೆ.