HomeKarnatakaಮದುವೆ ಸಂಭ್ರಮದಲ್ಲಿದ್ದವರಿಗೆ ಬಿಗ್ ಶಾಕ್: ಮನೆಯಲ್ಲಿದ್ದ ಚಿನ್ನಾಭರಣ, ನಗದು ದೋಚಿದ ಕಳ್ಳರು

ಮದುವೆ ಸಂಭ್ರಮದಲ್ಲಿದ್ದವರಿಗೆ ಬಿಗ್ ಶಾಕ್: ಮನೆಯಲ್ಲಿದ್ದ ಚಿನ್ನಾಭರಣ, ನಗದು ದೋಚಿದ ಕಳ್ಳರು

ಬೆಂಗಳೂರು: ಮದುವೆಗೆಂದು ತಂದಿದ್ದ ಚಿನ್ನಾಭರಣ, ಹಣವನ್ನು ಕಳ್ಳರು ಎಗರಿಸಿದ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕು ಶಿವಣ್ಣ ಎಂಬುವರ ಮನೆಯಲ್ಲಿದ್ದ ನಗದು ಚಿನ್ನಾಭರಣ ಕಳವು ಮಾಡಲಾಗಿದೆ.

5 ಲಕ್ಷ ರೂಪಾಯಿ ನಗದು, 6 ಲಕ್ಷ ರೂಪಾಯಿ ಮೌಲ್ಯದ 85 ಗ್ರಾಂ ಚಿನ್ನಾಭರಣ ದೋಚಲಾಗಿದೆ. ನೆಲಮಂಗಲ ತಾಲೂಕಿನ ಟೀಚರ್ಸ್ ಲೇಔಟ್ ನಲ್ಲಿ ಘಟನೆ ನಡೆದಿದೆ.

ನಿಶ್ಚಿತಾರ್ಥಕ್ಕಾಗಿ ಕಲ್ಯಾಣ ಮಂಟಪಕ್ಕೆ ಕುಟುಂಬದವರು ತೆರಳಿದ್ದರು. ಬೆಳಗ್ಗೆ ಮನೆಗೆ ಬಂದು ನೋಡಿದಾಗ ನಗ, ನಾಣ್ಯ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಕಲ್ಯಾಣ ಮಂದಿರಕ್ಕೆ ಕೊಡಲು ಹಣ ತೆಗೆದುಕೊಂಡು ಹೋಗಲು ಮನೆಗೆ ಬಂದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular