HomeKarnatakaBIG NEWS: ಬ್ರ್ಯಾಂಡ್ ಬೆಂಗಳೂರು ಅಲ್ಲ; ಇದು ಬ್ಯಾಡ್ ಬೆಂಗಳೂರು: ಕಾಂಗ್ರೆಸ್ ನವರದ್ದು 60% ಸರ್ಕಾರ:...

BIG NEWS: ಬ್ರ್ಯಾಂಡ್ ಬೆಂಗಳೂರು ಅಲ್ಲ; ಇದು ಬ್ಯಾಡ್ ಬೆಂಗಳೂರು: ಕಾಂಗ್ರೆಸ್ ನವರದ್ದು 60% ಸರ್ಕಾರ: ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ನವರು ಈ ಹಿಂದೆ ನಮಗೆ 40% ಸರ್ಕಾರ ಎಂದು ಬಿಜೆಪಿ ಸರ್ಕಾರದ ವಿರುದ್ಧ ಆರೋಪ ಮಾಡಿದ್ದರು. ಆದರೆ ಈಗ ಕಾಂಗ್ರೆಸ್ ನದ್ದು 60% ಸರ್ಕಾರವಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಕಾಂಗ್ರೆಸ್ ಸರ್ಕಾರ ರಾಜ್ಯದ ಜನರನ್ನು ಸುಲಿಗೆ ಮಾಡುವ ಕೆಲಸ ಮಾಡುತ್ತಿದೆ. ಬಿಜೆಪಿ ವಿರುದ್ಧ 40% ಕಮಿಷನ್ ಆರೋಪ ಸುಳ್ಲು ಎಂಬುದು ಲೋಕಾಯುಕ್ತ ತನಿಖೆಯಲ್ಲಿ ಸಾಬೀತಾಗಿದೆ. ಕಾಂಗ್ರೆಸ್ ಸರ್ಕಾರದಲ್ಲಿ 60% ಕಮಿಷನ್ ನಡೆಯುತ್ತಿದೆ ಎಂದು ಆರೋಪಿಸಿಇದರು.

ಮಳೆಯಿಂದ ಮುಳುಗುವ ಬೆಂಗಳೂರು ಆಯ್ತು, ಯಾವುದಾದರೂ ಒಂದು ಗುಂಡಿ ಇಲ್ಲದ ರಸ್ತೆ ತೋರಿಸಿ. ಹಿಂದೆ ಭಗವಾನ್ ಬುದ್ಧ ಸಾವಿಲ್ಲದ ಮನೆಯ ಸಾಸಿವೆ ತರುವಂತೆ ಹೇಳಿದ್ರು. ಅದೇ ರೀತಿ ಬೆಂಗಳೂರಿನಲ್ಲಿ ಗುಂಡಿ ಇಲ್ಲದ ರಸ್ತೆ ತೋರಿಸಿ ಎನ್ನುವಂತಾಗಿದೆ. ಬ್ರ್ಯಾಂಡ್ ಬೆಂಗಳೂರು ನಿರ್ಮಾತೃ ಗುಂಡಿ ಇಲ್ಲದ ರಸ್ತೆ ತೋರಿಸಲಿ. ಇದು ಬ್ರ್ಯಾಂಡ್ ಬೆಂಗಳೂರು ಅಲ್ಲ, ಬ್ಯಾಡ್ ಬೆಂಗಳೂರು ಆಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular