HomeKarnatakaಹಳ್ಳಕ್ಕೆ ಉರುಳಿಬಿದ್ದ ಟ್ರ್ಯಾಕ್ಟರ್: ತಂದೆ-ಮಗ ದುರ್ಮರಣ

ಹಳ್ಳಕ್ಕೆ ಉರುಳಿಬಿದ್ದ ಟ್ರ್ಯಾಕ್ಟರ್: ತಂದೆ-ಮಗ ದುರ್ಮರಣ

ತುಮಕೂರು: ಟ್ರ್ಯಾಕ್ಟರ್ ಹಳ್ಳಕ್ಕೆ ಉರುಳಿಬಿದ್ದ ಪರಿಣಾಮ ತಂದೆ ಹಾಗೂ ಮಗ ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಕೊತ್ತಗೆರೆಯಲ್ಲಿ ನಡೆದಿದೆ.

ಜಾಣಗೆರೆ ಗ್ರಾಮದ ಶಿವರಾಮಯ್ಯ (52) ಹಾಗೂ ಮಗ ಹರೀಶ್ (21) ಮೃತರು. ಮೃತ ಶಿವರಾಮಯ್ಯ, ಸಾಹಿತಿ, ಗಡಿ ಅಭಿವೃದ್ದಿ ಪ್ರಾಧಿಕಾರದ ಸದಸ್ಯ ಜಾಣಗೆರೆ ವೆಂಕಟರಾಮಯ್ಯ ಅವರ ಸಹೋದರ.

ಟ್ರ್ಯಾಕ್ಟರ್ ನಲ್ಲಿ ಅಡಿಕೆ ತುಂಬಿಕೊಂಡು ಬರುತ್ತಿದ್ದಾಗ ರಸ್ತೆ ತಿರುವಿನಲ್ಲಿ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದೆ. ಸ್ಥಳದಲ್ಲೇ ತಂದೆ-ಮಗ ಸಾವನ್ನಪ್ಪಿದ್ದಾರೆ. ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular