ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಿ.ಇ.ಟಿ., ಎನ್.ಇ.ಇ.ಟಿ ಮೂಲಕ ಪ್ರವೇಶ ಪರಿಕ್ಷೆಯಲ್ಲಿ ಉತ್ತೀರ್ಣರಾಗಿ ಇಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ ಇತ್ಯಾದಿ ವೃತ್ತಿಪರ ಪದವಿ ಹಾಗೂ ಸ್ನಾತಕೋತ್ತರ ಪದವಿ, ವೃತ್ತಿಪರ ಪಿ.ಎಚ್.ಡಿ ಕೋರ್ಸ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಡಿಸೆಂಬರ್ 15, 2024 ರೊಳಗಾಗಿ kacdc.karnataka.gov.in ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2957829 ಅಥವಾ 9448451111 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಆರ್ಯ ವೈಶ್ಯ ಸಮುದಾಯಗಳ ಅಭಿವೃಧ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.