ಬೆಂಗಳೂರು: ರಾಜ್ಯದಲ್ಲಿ ಹಳೆ ವಾಹನಗಳಿಗೆ HSRP ಅಳವಡಿಕೆ ಗಡುವನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ.
ರಾಜ್ಯದಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ (ಹಳೆಯ /ಅಸ್ತಿತ್ವದಲ್ಲಿರುವ ವಾಹನಗಳು- ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು, ಮಧ್ಯಮ ಮತ್ತು ಭಾರೀ ವಾಣಿಜ್ಯ ವಾಹನಗಳು, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ) ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು(High Security Registration Plates-HSRP) ಅಳವಡಿಸುವುದು ಕಡ್ಡಾಯವಾಗಿದೆ.
ಹೆಚ್.ಎಸ್.ಆರ್.ಪಿ ಅಳವಡಿಕೆಗೆ ನವೆಂಬರ್ 30 ರವರೆಗೆ ಅವಧಿ ವಿಸ್ತರಿಸಲಾಗಿದೆ. ಸಾರ್ವಜನಿಕರು ಆನ್ ಲೈನ್ ಮೂಲಕ ಹೆಚ್.ಎಸ್.ಆರ್.ಪಿ ಪಡೆಯಲು ತೊಂದರೆಗಳಾದಲ್ಲಿ ಸಹಾಯವಾಣಿ ಸಂಖ್ಯೆ 94498 63429 / 94498 63426ಯನ್ನು ಕಚೇರಿ ಕೆಲಸದ ಸಮಯ ಬೆಳಿಗ್ಗೆ 10 ರಿಂದ ಸಂಜೆ 5.30ರೊಳಗೆ ಸಂಪರ್ಕಿಸಬಹುದು.
ಸಾರ್ವಜನಿಕರು https://transport.karnataka.gov.in ಅಥವಾ www.siam.in ಗೆ ಭೇಟಿ ನೀಡಬಹುದು ಎಂದುಹೇಳಲಾಗಿದೆ.