ಬೆಂಗಳೂರು: ಬಿಬಿಎಂಪಿ ಪೌರಕಾರ್ಮಿಕರ ನೇಮಕಾತಿಗೆ ಸಂಬಂಧಿಸಿದಂತೆ 12,692 ಪೌರಕಾರ್ಮಿಕರ ಅಂತಿಮ ಪಟ್ಟಿ ಪ್ರಕಟಿಸಲಾಗಿದೆ.
ಕಳೆದ ಅ. 9 ರಂದು 12,692 ಪೌರಕಾರ್ಮಿಕರ ಕರಡು ಆಯ್ಕೆ ಪಟ್ಟಿಯನ್ನು ಪ್ರಕಟಿಸಿ ಆಕ್ಷೇಪಣೆ ಆಹ್ವಾನಿಸಲಾಗಿತ್ತು. ಸಲ್ಲಿಕೆಯಾಗಿರುವ ಆಕ್ಷೇಪಣೆಗಳನ್ನು ಪರಿಶೀಲಿಸಿ ಲೋಪ ಸರಿಪಡಿಸಿ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಆಯಾ ವಲಯದ ಜಂಟಿ ಆಯುಕ್ತರ ಕಚೇರಿ ಮತ್ತು ಘನ ತ್ಯಾಜ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕಚೇರಿಯಲ್ಲಿ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದೆ. www.bbmp.gov.in/home ವೆಬ್ಸೈಟ್ ನಲ್ಲಿಯೂ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಅಂತಿಮ ಪಟ್ಟಿಯಲ್ಲಿರುವವರು ನವೆಂಬರ್ 25 ರಿಂದ 30ರವರೆಗೆ ವಲಯ ಮಟ್ಟದಲ್ಲಿ ನೀಡಲಾಗುವ ವೇಳಾಪಟ್ಟಿಗೆ ಅನುಗುಣವಾಗಿ ಹಾಜರಾಗಿ ತಮ್ಮ ಮೂಲ ದಾಖಲೆಗಳನ್ನು ಪರಿಶೀತನೆಗೊಳಪಡಿಸಿಕೊಳ್ಳುವಂತೆ ತಿಳಿಸಲಾಗಿದೆ.