HomeIndiaಇದು 140 ಕೋಟಿ ಭಾರತೀಯರಿಗೆ ಸಂದ ಗೌರವ: ನೈಜೀರಿಯಾದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಸ್ವೀಕರಿಸಿದ...

ಇದು 140 ಕೋಟಿ ಭಾರತೀಯರಿಗೆ ಸಂದ ಗೌರವ: ನೈಜೀರಿಯಾದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಸ್ವೀಕರಿಸಿದ ಪ್ರಧಾನಿ ಮೋದಿ

ಅಬುಜಾ: ನೈಜೀರಿಯಾ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ನೈಜೀರಿಯಾ ಸರ್ಕಾರ ತನ್ನ ದೇಶದ ಎರಡನೇ ಅತ್ಯುತ್ತಮ ನಾಗರಿಕ ಪ್ರಶಸ್ತಿ ‘ದಿ ಗ್ರಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ಬೈಗರ್’ ಪ್ರಶಸ್ತಿ ನೀಡಿ ಗೌರವಿಸಿದೆ.

ನೈಜಿರಿಯಾ ಪ್ರಧಾನಿ ಬೋಲಾ ಅಹಮದ್ ಟಿನುಬು ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ನೈಜೀರಿಯಾಕ್ಕೆ ಪ್ರವಾಸ ಕೈಗೊಂಡಿದ್ದಾರೆ. 17 ವರ್ಷದ ನಂತರ ಭಾರತದ ಪ್ರಧಾನಿಯೊಬ್ಬರು ನೈಜೀರಿಯಾ ಪ್ರವಾಸ ಕೈಗೊಂಡಿದ್ದು, ಅಲ್ಲಿನ ಸರ್ಕಾರ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಿದೆ.

ಇದಕ್ಕೆ ಕೃತಜ್ಞತೆ ಸಲ್ಲಿಸಿದ ಪ್ರಧಾನಿ ಮೋದಿ, ಇದು 140 ಕೋಟಿ ಭಾರತೀಯರಿಗೆ ಸಂದ ಗೌರವವಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹಿಂದೆ 1969 ರಲ್ಲಿ ರಾಣಿ ಎಲಿಜಬೆತ್ ಅವರಿಗೆ ಈ ಗೌರವ ನೀಡಲಾಗಿತ್ತು. ನಂತರ ಈ ಪ್ರಶಸ್ತಿ ಪಡೆದ ಎರಡನೇ ವಿದೇಶಿ ವ್ಯಕ್ತಿ ಎನ್ನುವ ಹೆಗ್ಗಳಿಸಿಗೆ ಪ್ರಧಾನಿ ಮೋದಿ ಪಾತ್ರರಾಗಿದ್ದಾರೆ. ಇದು ಪ್ರಧಾನಿ ಮೋದಿ ಅವರಿಗೆ ದೊರೆತ 17ನೇ ಅಂತರರಾಷ್ಟ್ರೀಯ ಪ್ರಶಸ್ತಿಯಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular