alex Certify ಜಮೀನು ಮಂಜೂರಾತಿ ಕೋರಿರುವ ಬಗರ್ ಹುಕುಂ ಸಾಗುವಳಿದಾರರಿಗೆ ಸಿಹಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಮೀನು ಮಂಜೂರಾತಿ ಕೋರಿರುವ ಬಗರ್ ಹುಕುಂ ಸಾಗುವಳಿದಾರರಿಗೆ ಸಿಹಿ ಸುದ್ದಿ

ಶಿವಮೊಗ್ಗ: ಬಗರ್ ಹುಕುಂ ಜಮೀನು ಮಂಜೂರಾತಿ ಕೋರಿದ ಅರ್ಹ ಫಲಾನುಭವಿಗಳನ್ನು ಗುರುತಿಸಿ ಶೀಘ್ರವೇ ಹಕ್ಕುಪತ್ರ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ.

ಸಾಗರದ ತಾಲೂಕು ಕಚೇರಿಯಲ್ಲಿ ಬಗರ್ ಹುಕುಂ ಸಮಿತಿ ಸಭೆ ನಡೆಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡುವ ಕೆಲಸ ಮಾಡಿಲ್ಲ. ಹೀಗಾಗಿ ಹೆಚ್ಚಿನ ಅರ್ಜಿಗಳು ವಿಲೇವಾರಿಯಾಗದೆ ಬಾಕಿ ಉಳಿದಿವೆ ಎಂದು ಹೇಳಿದ್ದಾರೆ.

ಕಂದಾಯ ಭೂಮಿ, ಅರಣ್ಯ ಭೂಮಿ ಬಗ್ಗೆ ಜಂಟಿ ಸರ್ವೇ ನಡೆಸುವ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಭೂಮಿ ಗುರುತಿಸುವ ಕಾರ್ಯ ನಡೆಸಲಾಗುವುದು. ಹಕ್ಕುಪತ್ರ ನೀಡಲು ಇರುವ ಕಾನೂನಿನ ತೊಡಕುಗಳನ್ನು ನಿವಾರಿಸಲಾಗುವುದು. ಶೀಘ್ರವೇ ಅರ್ಜಿಗಳನ್ನು ವಿಲೇವಾರಿ ಮಾಡಿ ಅರ್ಹ ಫಲಾನುಭವಿಗಳಿಗೆ ಹಕ್ಕು ಪತ್ರ ನೀಡಲಾಗುವುದು ಎಂದು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...