ರಾಯಚೂರು : ರಾಯಚೂರಿನಲ್ಲಿ ಪಿಡಿಒ ಪ್ರಶ್ನೆ ಪತ್ರಿಕೆ ಲೀಕ್ ಆಗಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ ಆರೋಪದ ಮೇರೆಗೆ 12 ಪರೀಕ್ಷಾರ್ಥಿಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಯಾದಗಿರಿ ಮೂಲದ 12 ಮಂದಿ ಪರೀಕ್ಷಾರ್ಥಿಗಳ ವಿರುದ್ಧ ಸಿಂಧನೂರು ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಸುಳ್ಳು ಸುದ್ದಿ ಹಬ್ಬಿಸಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ ಆರೋಪದಡಿ 12 ಮಂದಿ ಪರೀಕ್ಷಾರ್ಥಿಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, 1 ಕೋಣೆಯಲ್ಲಿ 24 ಅಭ್ಯರ್ಥಿಗಳನ್ನು ಪರೀಕ್ಷೆಗೆ ಕೂರಿಸಲಾಗಿದೆ. 24 ಪ್ರಶ್ನೆಪತ್ರಿಕೆ ಬದಲು 12 ಪ್ರಶ್ನೆಪತ್ರಿಕೆ ಮಾತ್ರ ಕಳುಹಿಸಲಾಗಿದೆ ಎಂದು ಅಭ್ಯರ್ಥಿಗಳು ಸಿಂಧನೂರಿನಲ್ಲಿ ನಿನ್ನೆ ಪ್ರತಿಭಟನೆ ನಡೆಸಿದ್ದರು. ಪರೀಕ್ಷೆಗೆ ಹಾಜರಾಗದೇ ಪಿಡಿಒ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.ನಮಗೆ ನ್ಯಾಯ ಬೇಕು ಎಂದು ಅಭ್ಯರ್ಥಿಗಳು ರಸ್ತೆ ತಡೆದು ಕೆಪಿಎಸ್ ಸಿ ವಿರುದ್ಧ ಆಕ್ರೋಶ ಹೊರ ಹಾಕಿ ಪ್ರತಿಭಟನೆ ನಡೆಸಿದ್ದರು.