ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಘಟನೆ ನಡೆದಿದೆ. ದೀಪಾ (36) ಎಂಬ ಮಹಿಳೆ ಮೃತಪಟ್ಟಿದ್ದು, ಮೊದಲು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿದ್ದಾರೆ ಎಂದು ಶಂಕಿಸಲಾಗಿತ್ತು. ಆದರೆ ಕುತ್ತಿಗೆಯಲ್ಲಿ ಯಾವುದೇ ಮಾರ್ಕ್ ಇರಲಿಲ್ಲ. ಅಲ್ಲದೇ ಬಾಯಿಯಲ್ಲಿ ನೊರೆ ಬಂದಿದೆ ಎನ್ನಲಾಗಿದೆ.
ಆಂಧ್ರ ಮೂಲದ ಮಹಿಳೆ ದೀಪಾ ಮೃತಪಟ್ಟಿದ್ದು,ಪತಿಯೇ ಕೊಲೆ ಮಾಡಿ ನೇಣು ಹಾಕಿರುವ ಶಂಕೆ ವ್ಯಕ್ತವಾಗಿದ್ದು, ಪತಿ ಸುರೇಶ್ ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.