HomeKarnatakaಅಧಿಕಾರ ಕಳೆದುಕೊಂಡರೂ ಪರವಾಗಿಲ್ಲ, ಜಾತಿ ಗಣತಿ ವರದಿ ಬಿಡುಗಡೆ ಮಾಡಿ: ಸಿಎಂ ಸಿದ್ಧರಾಮಯ್ಯ ಸಮ್ಮುಖದಲ್ಲೇ ಸ್ವಾಮೀಜಿ...

ಅಧಿಕಾರ ಕಳೆದುಕೊಂಡರೂ ಪರವಾಗಿಲ್ಲ, ಜಾತಿ ಗಣತಿ ವರದಿ ಬಿಡುಗಡೆ ಮಾಡಿ: ಸಿಎಂ ಸಿದ್ಧರಾಮಯ್ಯ ಸಮ್ಮುಖದಲ್ಲೇ ಸ್ವಾಮೀಜಿ ಒತ್ತಾಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರ ಕಳೆದುಕೊಂಡರೂ ಪರವಾಗಿಲ್ಲ, ಜಾತಿ ಗಣತಿ ವರದಿ ಬಿಡುಗಡೆಯಾಗಲಿ ಎಂದು ಸಿದ್ಧರಾಮಾನಂದ ಶ್ರೀ ಮನವಿ ಮಾಡಿದ್ದಾರೆ.

ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಾತಿಗಣತಿ ವರದಿ ಬಿಡುಗಡೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೇಳಿದ್ದರು. ಈಗ ಯಾಕೆ ವರದಿ ಬಿಡುಗಡೆ ಮಾಡಲು ಮೀನಮೇಷ ಎಣಿಸುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಎದುರೇ ಈ ಬಗ್ಗೆ ಪ್ರಸ್ತಾಪಿಸಿದ ಸ್ವಾಮೀಜಿ, ಕೂಡಲೇ ಜಾತಿ ಗಣತಿ ವರದಿ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಭಂಜನಾಚಾರ್ಯರು ಹಾಡಿ ಹೊಗಳಿದ್ದಾರೆ, ಕನಕದಾಸರು ಚಿನ್ನಕ್ಕಿಂತ ಅನ್ನಕ್ಕೆ ಹೆಚ್ಚು ಮಹತ್ವ ಕೊಟ್ಟವರು. ತಮಗೆ ಸಿಕ್ಕ ಅವಕಾಶದಲ್ಲಿ ಜನರಿಗೆ ಅನ್ನವನ್ನು ಉಣಿಸಿದವರು. ಅದೇ ರೀತಿ ಸಿದ್ದರಾಮಯ್ಯ ಅನ್ನಭಾಗ್ಯ ಜಾರಿ ಮಾಡಿದರು. ಅನ್ನಭಾಗ್ಯದ ಮೂಲಕ ಹಸಿವು ನೀಗಿಸುವ ಕೆಲಸವನ್ನು ಸಿದ್ದರಾಮಯ್ಯ ಮಾಡಿದ್ದಾರೆ. ಸಿದ್ದರಾಮಯ್ಯ ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಜಾರಿ ಮಾಡಿದ್ದರು ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನಮ್ಮ ನಾಡನ್ನು ಚಿನ್ನದ ನಾಡು ಎನ್ನುತ್ತಾರೆ. ಇಂತಹ ನಾಡನ್ನು ಯಶಸ್ವಿಯಾಗಿ ಸಿದ್ದರಾಮಯ್ಯ ಮುನ್ನಡೆಸುತ್ತಿದ್ದಾರೆ. ಕನಕದಾಸರು ಜ್ಞಾನದ ಮೂಲಕ ಎಲ್ಲಾ ಸಮುದಾಯ ತಲುಪಿದ್ದಾರೆ. ಅಲ್ಲದೆ ಸಮುದಾಯವನ್ನು ಮೇಲಕ್ಕೆ ಎತ್ತಿದವರು ಕನಕದಾಸರು. ಅದರ ಪ್ರತಿರೂಪವೇ ಇವತ್ತು ಸಿದ್ದರಾಮಯ್ಯ ಸಿಎಂ ಆಗಿದ್ದಾರೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular