HomeKarnatakaBIG NEWS: ಡಿ. 9 ರಿಂದ 20ರವರೆಗೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ: ಸಭಾಪತಿ ಹೊರಟ್ಟಿ

BIG NEWS: ಡಿ. 9 ರಿಂದ 20ರವರೆಗೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ: ಸಭಾಪತಿ ಹೊರಟ್ಟಿ

ಧಾರವಾಡ: ಬೆಳಗಾವಿಯಲ್ಲಿ ಡಿಸೆಂಬರ್ 9 ರಿಂದ 20ರ ವರೆಗೆ ಚಳಿಗಾಲದ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಅಧಿವೇಶನದಲ್ಲಿ ಅನೇಕ ಬಿಲ್ ಗಳು ಮಂಡನೆಯಾಗಲಿವೆ. ಅನೇಕ ವಿಷಯಗಳ ಕುರಿತಾಗಿ ಚರ್ಚೆ ನಡೆಯಲಿದ್ದು, ಚಳಿಗಾಲದ ಅಧಿವೇಶನ ಈ ಬಾರಿ ರಂಗೇರಲಿದೆ ಎಂದು ಹೇಳಿದ್ದಾರೆ.

ಉತ್ತರ ಕರ್ನಾಟಕದ ಬಗ್ಗೆ ಎಲ್ಲಾ ಶಾಸಕರು ಕಾಳಜಿ ವಹಿಸಬೇಕೆಂಬುದು ನನ್ನ ಅನಿಸಿಕೆಯಾಗಿದ್ದು, ಅಧಿವೇಶನಕ್ಕೆ ಮೊದಲೇ ವಿರೋಧ ಪಕ್ಷದ ನಾಯಕರ ಸಭೆ ನಡೆಸಲಾಗುವುದು. ಯಾವ ರೀತಿ ಅಧಿವೇಶನ ನಡೆಸಬೇಕೆಂದು ತೀರ್ಮಾನ ಮಾಡಲಾಗುವುದು. ಡಿಸೆಂಬರ್ 2ರಂದು ಸಭೆ ನಡೆಯಲಿದ್ದು, ಅತ್ಯಂತ ಸರಳವಾಗಿ ಅಧಿವೇಶನ ನಡೆಸಿ ಸದುಪಯೋಗ ಮಾಡಿಕೊಳ್ಳುವ ಬಗ್ಗೆ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular