ಬೆಂಗಳೂರು: ಅಕಾಡೆಮಿಗಳು, ಪ್ರಾಧಿಕಾರದಿಂದ ಪ್ರಕಟಿಸುವ ಪುಸ್ತಕಗಳನ್ನು ಶೇಕಡ 50 ದರದಲ್ಲಿ ಮಾರಾಟ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸೋಮವಾರ ಬೆಂಗಳೂರಿನಲ್ಲಿ ಆಯೋಜಿಸಿದ್ದ ಸಂತ ಶ್ರೇಷ್ಠ ಕನಕದಾಸರ ಜಯಂತಿ ಕಾರ್ಯಕ್ರಮ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ಹಾವೇರಿ ಜಿಲ್ಲೆ ಬಂಕಾಪುರದಲ್ಲಿ ಕನಕದಾಸರು ನೆಲೆಸಿದ್ದ ಸ್ಥಳ ಅಭಿವೃದ್ಧಿ ಪಡಿಸಬೇಕು. ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮಾಡುವುದಕ್ಕೆ ಒಪ್ಪಿಗೆ ನೀಡುವಂತೆ ಸಂಘಟಕರು ವೇದಿಕೆಯಲ್ಲಿ ಸಲ್ಲಿಸಿದ ಮನವಿಗೆ ಮುಖ್ಯಮಂತ್ರಿಗಳು ಅನುಮೋದನೆ ನೀಡಿದ್ದು, ಎರಡು ಕಾರ್ಯಕ್ರಮಗಳ ಜಾರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಮತ್ತು ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.
ಪ್ರಾಧಿಕಾರಗಳು, ಅಕಾಡೆಮಿಗಳಿಂದ ಪ್ರಕಟಿಸುವ ಪುಸ್ತಕಗಳನ್ನು ಶೇಕಡ 50 ರಷ್ಟು ರಿಯಾಯಿತಿ ನೀಡಿ ಮಾರಾಟ ಮಾಡುವಂತೆ ಸೂಚಿಸಿದ್ದಾರೆ.