ಮುಂಬೈ: ಮಹಾರಾಷ್ಟ್ರಾ ಚುನಾವಣೆ ಅಖಾಡ ರಂಗೇರಿದ್ದು, ಕುರುಡು ಕಾಂಚಾಣದ ಸದ್ದು ಕೂದ ಜೋರಾಗಿದೆ. ಮತದಾರರಿಗೆ ಹಂಚಲು ಸಂಗ್ರಹಿಸಿಟ್ಟಿದ್ದ 1.98 ಕೋಟಿ ರೂಪಾಯಿಯನ್ನು ಚುನಾವಣಾಧಿಕಾರಿಗಳು ಜಪ್ತಿ ಮಾಡಿದ್ದಾರೆ.
ನಾಸಿಕ್ ನ ಹೋಟೆಲ್ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಬರೋಬ್ಬರಿ 1.98 ಕೋಟಿ ಹಣವನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಈ ದಾಳಿ ನಡೆಸಲಾಗಿದ್ದು, ದಾಖಲೆಗಳಿಲ್ಲದೇ ಅಕ್ರಮವಾಗಿ ಹಣ ಸಂಗ್ರಹಿಸಿಡಲಾಗಿತ್ತು. ಈ ಹಿನ್ನೆಲೆಯಲ್ಲಿ ಹಣ ಜಪ್ತಿ ಮಾಡಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಜಲಾಲ್ ಶರ್ಮಾ ತಿಳಿಸಿದ್ದಾರೆ.
ನ.12ರಂದು ನವಿ ಮುಂಬೈನ ಮನೆಯೊಂದರಲ್ಲಿ ಸಂಗ್ರಹಿಸಿಟ್ಟಿದ್ದ 2.5 ಕೋಟಿ ರೂಪಾಯಿ ಅಕ್ರಮ ಹಣವನ್ನು ಪೊಲೀಸರು ಜಪ್ತಿ ಮಾಡಿದ್ದರು.