ಬೆಂಗಳೂರು : ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸಿ.ಪಿ ಯೋಗೇಶ್ವರ್ ವಿರುದ್ಧ ಸಹಿ ನಕಲು ಮಾಡಿದ ಆರೋಪದ ಹಿನ್ನೆಲೆ ದೂರು ದಾಖಲಾಗಿದೆ.
ಸಿಪಿ ಯೋಗೇಶ್ವರ್ ಅವರ ಮೊದಲೇ ಪತ್ನಿಯ ಪುತ್ರ ಶ್ರವಣ್ ಅವರ ಸಹಿ ನಕಲು ಮಾಡಿದ ಆರೋಪದಡಿ ಸಿ ಪಿ ಯೋಗೇಶ್ವರ್ ವಿರುದ್ಧ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ನಲ್ಲಿ ಅವರ ಪುತ್ರ ದಾವೆ ಹೂಡಿದಿದ್ದಾರೆ. ಪ್ರಕರಣದ ವಿಚಾರಣೆ ನಾಳೆ (ನ.20) ರಂದು ನಡೆಯಲಿದೆ.
ಪ್ರಕರಣದ ಹಿನ್ನೆಲೆ
ಸಿಪಿ ಯೋಗೇಶ್ವರ್ ಅವರ ಮೊದಲ ಪತ್ನಿ ಮತ್ತು ಪುತ್ರ ಶ್ರವಣ್ ಅವರು ಕಳೆದ 2 ವರ್ಷದ ಹಿಂದೆ ಬೆಂಗಳೂರಿನಲ್ಲಿ ಮನೆಯೊಂದನ್ನು ಕೊಂಡು ಕೊಂಡಿದ್ದರು. ಈ ಮನೆ ಸಿಪಿ ಯೋಗೇಶ್ವರ್ ಮೊದಲ ಪತ್ನಿ ಹಾಗೂ ಶ್ರವಣ್ ಹೆಸರಲ್ಲಿದೆ. ಶ್ರವಣ್ ಹಾಗೂ ಶ್ರವಣ್ ತಾಯಿ ಇಬ್ಬರೂ ಸೇರಿ ಮನೆಯನ್ನು ನಿಶಾಗೆ ಗಿಫ್ಟ್ ಆಗಿ ನೀಡಿದ್ದಾರೆ.
ಆದರೆ, ಈ ಮನೆಯಲ್ಲಿ ತನಗೂ ಭಾಗ ಬೇಕು ಎಂದು ಸಿಪಿ ಯೋಗೇಶ್ವರ್ ಕೋರ್ಟ್ ನಲ್ಲಿ ಅರ್ಜಿ ಹಾಕಿದ್ದಾರೆ. ಅಲ್ಲದೇ, “ನಾನು ನನ್ನ ಅಕ್ಕನಿಗೆ ಮನೆ ಗಿಫ್ಟ್ ನೀಡಿಲ್ಲ. ಮನೆಯಲ್ಲಿ ನನಗೂ ಭಾಗ ಬೇಕು” ಅಂತ ಶ್ರವಣ್ ಅವರ ಹೆಸರಿನಲ್ಲಿ ಸಿಪಿ ಯೋಗೇಶ್ವರ ಕೋರ್ಟ್ನಲ್ಲಿ ಅರ್ಜಿ ಹಾಕಿದ್ದಾರೆ. ಈ ಅರ್ಜಿಯಲ್ಲಿ ಶ್ರವಣ್ ಅವರ ಸಹಿಯನ್ನು ಸಿಪಿ ಯೋಗೇಶ್ವರ್ ಮಾಡಿರುವ ಆರೋಪ ಕೇಳಿಬಂದಿದೆ.