ಹೊಸನಗರ : ಕಳೆನಾಶಕ ಸೇವಿಸಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ಸಮೀಪದ ಚಿಕ್ಕಮಣತಿ ಗ್ರಾಮದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಅನುದೀಪ್ ಜಿ ಎಂದು ಗುರುತಿಸಲಾಗಿದೆ. ಕಳೆದ ನ.15 ರಂದು ಕಳೆನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದ ಬಾಲಕನನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆತ ಇಂದು ಮೃತಪಟ್ಟಿದ್ದಾನೆ. ಹೊಸನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬಾಲಕನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತ ಬಾಲಕನ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಚಿಕ್ಕ ಚಿಕ್ಕ ಮಕ್ಕಳು ದುಡುಕಿ ಆತ್ಮಹತ್ಯೆ ಹಾದಿ ಹಿಡಿಯುತ್ತಿರುವುದು ದುರಂತವೇ ಸರಿ.