ಶೀಘ್ರವೇ ಭಾರತಕ್ಕೆ ವ್ಲಾಡಿಮಿರ್ ಪುಟಿನ್ ಭೇಟಿ ನೀಡಲಿದ್ದಾರೆ ಎಂದು ರಷ್ಯಾ ಸರ್ಕಾರದ ಮೂಲಗಳು ಮಾಹಿತಿ ನೀಡಿದೆ.
ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಶೀಘ್ರದಲ್ಲೇ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ಕ್ರೆಮ್ಲಿನ್ ಪತ್ರಿಕಾ ಕಾರ್ಯದರ್ಶಿ ಡಿಮಿಟ್ರಿ ಪೆಸ್ಕೊವ್ ಮಂಗಳವಾರ ಪ್ರಕಟಿಸಿದ್ದಾರೆ.
ಪುಟಿನ್ ಭೇಟಿಯ ದಿನಾಂಕಗಳನ್ನು ಇನ್ನೂ ಅಂತಿಮಗೊಳಿಸಲಾಗಿಲ್ಲವಾದರೂ, ಈ ಘೋಷಣೆಯು ಉಭಯ ದೇಶಗಳ ನಡುವಿನ ದೀರ್ಘಕಾಲೀನ ಪಾಲುದಾರಿಕೆಯನ್ನು ಬಲಪಡಿಸುವಲ್ಲಿ ಮಹತ್ವದ ಹೆಜ್ಜೆಯನ್ನು ಸೂಚಿಸುತ್ತದೆ.