HomeKarnatakaಗ್ಯಾರಂಟಿ ಯೋಜನೆಗಳ ಬಗ್ಗೆ ಸುಳ್ಳು ಜಾಹೀರಾತು: ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕ್ರಮಕ್ಕೆ ರಾಜ್ಯ ಚಿಂತನೆ

ಗ್ಯಾರಂಟಿ ಯೋಜನೆಗಳ ಬಗ್ಗೆ ಸುಳ್ಳು ಜಾಹೀರಾತು: ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕ್ರಮಕ್ಕೆ ರಾಜ್ಯ ಚಿಂತನೆ

ಬೆಂಗಳೂರು: ಮಹಾರಾಷ್ಟ್ರ ಚುನಾವಣೆಯಲ್ಲಿ ಕರ್ನಾಟಕದ ಗ್ಯಾರಂಟಿ ಯೋಜನೆಗಳ ಕುರಿತು ಅವಮಾನವಾಗುವ ರೀತಿಯಲ್ಲಿ ಜಾಹೀರಾತು ಪ್ರಕಟಿಸಲಾಗಿದ್ದು, ಇದರ ವಿರುದ್ಧ ಕ್ರಮ ಕೈಗೊಳ್ಳಲು ಚಿಂತನೆ ನಡೆಸಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ ಚುನಾವಣೆಯಲ್ಲಿ ಮಹಾವಿಕಾಸ್ ಅಘಾಡಿ ಮೈತ್ರಿಕೂಟ ಗ್ಯಾರಂಟಿ ಕಾರ್ಡ್ ಬಿಡುಗಡೆ ಮಾಡಿದ್ದ ನಂತರ ಬಿಜೆಪಿಯವರು, ಕರ್ನಾಟಕದಲ್ಲಿ 5 ಗ್ಯಾರಂಟಿ ಯೋಜನೆಗಳು ಅನುಷ್ಠಾನಗೊಂಡಿಲ್ಲ. ಮಹಾರಾಷ್ಟ್ರದಲ್ಲಿಯೂ ಗ್ಯಾರಂಟಿ ಯೋಜನೆ ಅನುಷ್ಠಾನವಾಗುವುದಿಲ್ಲವೆಂದು ಸುಳ್ಳು ಜಾಹೀರಾತು ನೀಡಿದ್ದು, ಇದರ ವಿರುದ್ಧ ಯಾವ ರೀತಿ ಕ್ರಮ ಕೈಗೊಳ್ಳಬೇಕೆಂದು ಚಿಂತನೆ ನಡೆಸಲಾಗಿದೆ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಿದೆ. ಇದರ ವಿರುದ್ಧ ಮಹಾರಾಷ್ಟ್ರ ಜಾಹೀರಾತು ಪ್ರಕಟಿಸಿದ್ದು, ಇದನ್ನು ಸಹಿಸುವುದಿಲ್ಲ. ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular